






ಮಡಿಕೇರಿ ಏ.9 NEWS DESK : ಎಂ.ಎ. ಕನ್ನಡ ವಿಭಾಗದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮ ಶೇ.78.10 ಅಂಕಗಳೊಂದಿಗೆ ವಿಶ್ವವಿದ್ಯಾನಿಲಯಕ್ಕೆ 7ನೇ ರ‍್ಯಾಂಕ್ ಪಡೆದಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ 20ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸುಮನ್ ಸೀತಮ್ಮಗೆ ಪದವಿ ಪ್ರದಾನ ಮಾಡಲಾಯಿತು. ಅಲ್ಲದೆ ವಿಶ್ವವಿದ್ಯಾನಿಲಯದ ಕೊಡಗು ಪ್ರಾದೇಶಿಕ ಕೇಂದ್ರದಿಂದ ಕನ್ನಡ ವಿಷಯದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.ಸುಮನ್ 2014ನೇ ಪಿ.ಯು.ಸಿ. ಕಲಾ ವಿಭಾಗದಲ್ಲಿ ಕೊಡಗಿಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದರು. ಸುಮನ್’ ಅವರ ಪತಿ ಬೊಟ್ಟಂಗಡ ತಿಲಕ್ ಹಾಗೂ ಮಗಳು ಸ್ತುತಿ ಬೋಜಮ್ಮ.ಇವರು ತೆರಾಲುವಿನಲ್ಲಿ ವಾಸವಾಗಿದ್ದಾರೆ.