






ಮಡಿಕೇರಿ ಏ.9 NEWS DESK : ಕೊಡಗು ಪತ್ರಕರ್ತರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಏ.11 ರಂದು ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸುಂಟಿಕೊಪ್ಪದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಭಾರ ಉಪ ತಹಶೀಲ್ದಾರ್ ಎನ್.ಆರ್. ಪ್ರಶಾಂತ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಪಿಡಿಒ ವಿ.ಜಿ. ಲೋಕೇಶ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್, ವಿಎಸ್‍ಎಸ್‍ಎನ್ ಅಧ್ಯಕ್ಷ ಕೆ.ಎಸ್. ಮಂಜುನಾಥ್ ಸೇರಿದಂತೆ ಸುಂಟಿಕೊಪ್ಪ ಭಾಗದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.