






ಮಡಿಕೇರಿ ಏ.9 NEWS DESK : ಬೆಂಗಳೂರು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಮಾಡುವ ಸುವರ್ಣ ಕರ್ನಾಟಕ ವೀರ ವನಿತೆ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಸಿಡಿಪಿಓ ಮತ್ತು ಮಹಿಳಾ ಮೇಲ್ವಿಚಾರಕಿ ಮೇಪಾಡಂಡ ಸವಿತಾ ಕೀರ್ತನ್ ಭಾಜನರಾಗಿದ್ದಾರೆ. ಇವರ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥದಿಂದ ನಾಡಿಗಾಗಿ ಸಲ್ಲಿಸಿದ ಅನುಪಮ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ರಾಷ್ಟ್ರೀಯ ಮಹಿಳಾ ಪ್ರತಿಭಾ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.