






ಮಡಿಕೇರಿ ಏ.10 NEWS DESK : ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಎರಡನೇ ಕಾರ್ಯಕ್ರಮ ನಡೆಯಿತು. ಶಾಲಾ ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ಮಾತನಾಡಿ ಶಾಲೆಯಲ್ಲಿ ಸಿಗುವ ಉಚಿತ ಸೌಲಭ್ಯ ಹಾಗೂ ಸರ್ಕಾರದ ವತಿಯಿಂದ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಲೆಯಲ್ಲಿನ ಸೌಲಭ್ಯಗಳು ನುರಿತ ಶಿಕ್ಷಕರು, ಸುಸಜ್ಜಿತ ನವೀನ ಕಟ್ಟಡ, ಸುಸಜ್ಜಿತ ಪೀಠೋಪಕರಣಗಳು, ಅನುಭವಾತ್ಮಕ ಕಲಿಕೆ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಉತ್ತಮ ವಿಜ್ಞಾನ, ಗಣಿತ, ಸಮಾಜ ಸಮಾಜ ವಿಜ್ಞಾನ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸೋಲಾರ್ ವ್ಯವಸ್ಥೆ, ಡಿಜಿಟಲ್ ಲೈಬ್ರರಿ(ಗ್ರಂಥಾಲಯ), ಆಧುನಿಕ ಕ್ರೀಡಾ ಉಪಕರಣಗಳು, ಐಡಿಕಾರ್ಡ್ ವ್ಯವಸ್ಥೆ ಇದೆ ಎಂದು ಶಾಲೆಯ ಮುಖ್ಯೋಪಾಧ್ಯಯರು ಹೇಳಿದರು. ಸರ್ಕಾರದ ಸೌಲಭ್ಯಗಳು ಪಠ್ಯಪುಸ್ತಕ ಮತ್ತು ಅಭ್ಯಾಸ ಪುಸ್ತಕ, 2 ಜೊತೆ ಸಮವಸ್ತ್ರ, ಕ್ಷೀರ ಭಾಗ್ಯದೊಂದಿಗೆ ರಾಗಿ ಮಾಲ್ಟ್, ಅಕ್ಷರ ದಾಸೋಹದಡಿ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ, ಪ್ರಧಾನಮಂತ್ರಿ ಪೋಷಣ್ ಶಕ್ತಿ ಯೋಜನೆಯಡಿ ವಾರಪೂರ್ತಿ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ, ಶೂ ಮತ್ತು ಸಾಕ್ಸ್ ವಿತರಣೆ, ವೈದ್ಯಕೀಯ ತಪಾಸಣೆ, ಶೈಕ್ಷಣಿಕ ಪ್ರವಾಸ, ಕ್ಷೇತ್ರ ಭೇಟಿ, ಹೊರ ಸಂಚಾರ, ಆರೋಗ್ಯ ಶಿಬಿರ, ಪ್ರತೀ ಮಗುವಿಗೂ ವೈಯಕ್ತಿಕ ಕಾಳಜಿ, ಆಪ್ತ ಸಮಾಲೋಚನೆ, ವೃತ್ತಿ ಮಾರ್ಗದರ್ಶನ ಸೌಲಭ್ಯ, ಕಂಪ್ಯೂಟರ್ ಶಿಕ್ಷಣ, ಯೋಗ, ವ್ಯಾಯಾಮ, ಕ್ರೀಡಾ ಚಟುವಟಿಕೆ, ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ, ಶೈಕ್ಷಣಿಕ ಪ್ರಗತಿಗೆ ಪೂರಕವಾದ ಅರಿವು ಕಾರ್ಯಕ್ರಮ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರಿಂದ ಸಲಹೆ ಸೂಚನೆ, ಹಾಗೂ ಮಾರ್ಗದರ್ಶನ ಸೌಲಭ್ಯ, ಜಾಗೃತಿ ಕಾರ್ಯಕ್ರಮಗಳು, ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನ, ಪ್ರಾಯೋಗಿಕ ಶಿಕ್ಷಣಕ್ಕೆ ಆದ್ಯತೆ. ಕ್ರೀಡೆಗೆ ಪ್ರೋತ್ಸಾಹ ಹೀಗೆ ಹಲವು ಚಟುವಟಿಕೆ ಒಳಗೊಂಡಿದೆ ಎಂದು ಶಾಲಾ ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ತಿಳಿಸಿದರು. 6ನೇ ತರಗತಿಯ ಯುವ ಮುತ್ತಪ್ಪ, 7ನೇ ತರಗತಿಯ ಅಂಚಲ್ ದೇಚಮ್ಮ ಹಾಗೂ ಖುಷಿ ಎಸ್.ವಿ. ಈ ವಿದ್ಯಾರ್ಥಿಗಳು ಮಧ್ಯಪ್ರದೇಶ ರಾಜ್ಯದ ಭೋಪಾಲ್ ಹಾಗೂ ಮನ್ಸೂರ್ ಸ್ಥಳದಲ್ಲಿ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಲಾದ ಹಾಕಿ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜಗದೀಶ್ ಮಾತನಾಡಿ ಶಾಲೆಗೆ ಪೋಷಕರ ಸಹಕಾರ ಅಗತ್ಯ ಎಂದು ತಿಳಿಸಿದರು. 2024-25 ನೇ ಸಾಲಿನ ನಿರಂತರ ಹಾಗೂ ವ್ಯಾಪಕ ಮೌಲ್ಯ ಮಾಪನದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಕವಿತಾ ನಿರೂಪಿಸಿದರು. ಸಿ.ಸಿ.ಮ್ಯಾಥ್ಯೂ ಸ್ವಾಗತಿಸಿದರು. ಜಯಮ್ಮ ವಂದಿಸಿದರು.