






ಮಡಿಕೇರಿ ಏ.10 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಎ(ಎಚ್‍ಇಪಿ, ಎಚ್‍ಪಿಕೆ, ಎಚ್‍ಇಕೆ), ಬಿ.ಕಾಂ(ಜನರಲ್), ಬಿ.ಕಾಂ (ಎಇಡಿಪಿ), ಬಿ.ಬಿ.ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜು ನ್ಯಾಕ್‍ನಿಂದ ‘ಬಿ’ ಮರು ಮಾನ್ಯತೆ ಪಡೆದಿದ್ದು, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತವಾದ ತರಗತಿ ಕೊಠಡಿಗಳು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಶ್ಯಕವಿರುವ ಸುಮಾರು 14,000 ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ, ಇ-ಗ್ರಂಥಾಲಯ, ಸ್ಮಾರ್ಟ್‍ಕ್ಲಾಸ್ ಸೌಲಭ್ಯ, ವೈಫೈ ಸೌಲಭ್ಯ, ಸಿ.ಸಿ.ಕ್ಯಾಮೆರಾ ಕಣ್ಗಾವಲಿನಲ್ಲಿರುವ ಸುಸಜ್ಜಿತ ಕಟ್ಟಡ, ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ, ಮಾದಕ ವಸ್ತು ನಿರ್ಮೂಲನಾ ಸಮಿತಿ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಧುನಿಕ ರೀತಿಯ ಬೋಧನ ಕ್ರಮ, ಉದ್ಯೋಗ ಮಾರ್ಗದರ್ಶನ ಕೇಂದ್ರ, ವಿದ್ಯಾರ್ಥಿ ನಿಲಯ, ಕ್ಯಾಂಟೀನ್ ವ್ಯವಸ್ಥೆ, ಇಕೋ ಕ್ಲಬ್, ವಿದ್ಯಾರ್ಥಿ ಭ್ರಾತೃತ್ವ ವೇದಿಕೆ, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಸಂಘ, ಅಂತರಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ ಕಾರ್ಯಕ್ರಮಗಳು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕøತಿಕ, ಎನ್.ಎಸ್.ಎಸ್, ರೋವರ್ಸ್, ರೇಂಜರ್ಸ್, ರೆಡ್‍ಕ್ರಾಸ್ ಮುಂತಾದ ಘಟಕಗಳು ಕಾರ್ಯನಿರತವಾಗಿದೆ. ಕಾಲೇಜು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷ ಅಭಿಯಾನ (ಪಿಎಂ-ಯುಎಸ್‍ಎಚ್‍ಎ) ಯೋಜನೆಯಡಿ ಆಯ್ಕೆಯಾಗಿದ್ದು, ರೂ. ಐದು ಕೋಟಿ ಅನುದಾನದೊಂದಿಗೆ ಕಾಲೇಜಿನ ಮೂಲಸೌಕರ್ಯ ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚಸಲು ವಿಶೇಷ ಆದ್ಯತೆ ನೀಡುತ್ತಿದೆ. ಎಲ್ಲಾ ವರ್ಗದ ವಿದ್ಯಾರ್ಥಿನಿಯರಿಗೆ ಶುಲ್ಕ ಮರುಭರಿಕೆ ಸೌಲಭ್ಯವಿದೆ. ಎಲ್ಲಾ ತರಗತಿ ಕೊಠಡಿಗಳಲ್ಲಿ ಐ.ಸಿ.ಟಿ. ಸೌಲಭ್ಯವಿದ್ದು, ಕರ್ನಾಟಕ ಸರ್ಕಾರದ ಎಲ್.ಎಂ.ಎಸ್ ಯೋಜನೆಯು ಜಾರಿಯಲ್ಲಿರುತ್ತದೆ. ಹೆಚ್ಚಿನ ಮಾಹಿತಿಗೆ 08274-255110, 9449766772, 9902817541 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಸಿ. ದಯಾನಂದ ತಿಳಿಸಿದ್ದಾರೆ.