






ಮಡಿಕೇರಿ ಏ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯು ಏಪ್ರಿಲ್, 14 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಏ.14 ರಂದು ಬೆಳಗ್ಗೆ 7.30 ಗಂಟೆಗೆ ವಿವಿಧ ಕಲಾತಂಡದೊಂದಿಗೆ ಕಾವೇರಿ ಕಲಾಕ್ಷೇತ್ರದಿಂದ ಸುದರ್ಶನ ವೃತ್ತದವರೆಗೆ ಮೆರವಣಿಗೆ ಸಾಗಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಬೆಂಗಳೂರು ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕರಾದ ಡಾ.ಶಿವಕುಮಾರ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.