






ಕುಶಾಲನಗರ ಏ.10 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ
ವಿಜಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ 2024-25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಸಲಾಯಿತು. ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಕುರಿತು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸಮುದಾಯವನ್ನು ಶಾಲೆಯ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶ ಇದಾಗಿದ್ದು, ಪೋಷಕರು ಮಕ್ಕಳ ಕಲಿಕೆಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.
ಪೋಷಕರು ಆಗಿಂದಾಗ್ಗೆ ಶಾಲೆಗೆ ಆಗಮಿಸಿ ಮಕ್ಕಳ ಕಲಿಕಾ ಪ್ರಗತಿ ಕುರಿತು ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಪೋಷಕರೊಂದಿಗೆ ಸಮಾಲೋಚನೆ ನಡೆಸಿದ ಶಾಲೆಯ ಮುಖ್ಯ ಶಿಕ್ಷಕಿ ಕೆ.ಡಿ.ನವೀನ ಮಾತನಾಡಿ, ಪೋಷಕರು ಮಕ್ಕಳ ಕಲಿಕಾ ಪ್ರಗತಿಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ಮಾರ್ಗದರ್ಶಕ ಅಧಿಕಾರಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿಯ ಶಿಕ್ಷಕ
ಎಚ್.ಬಿ.ದಿನೇಶಾಚಾರಿ ಮಾತನಾಡಿ, ಪೋಷಕರು ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಯೊಂದಿಗೆ ಶಾಲಾ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳ ದಾಖಲಾತಿ ಯೋಜನೆಯಡಿ ತೆರಳಿದ್ದ ಪ್ರೌಢಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಕೆ.ಟಿ.ಸೌಮ್ಯ, ಪ್ರಾಥಮಿಕ ಶಾಲಾ ಶಿಕ್ಷಕರಾದ ಎಚ್.ಸಿ.ಬಸವರಾಜ್, ಮಂಗಳಗೌರಿ, ಅತಿಥಿ ಶಿಕ್ಷಕಿ ಬಿ.ಜಿ.ಶಶಿಕಲಾ, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.