






ಮಡಿಕೇರಿ ಏ.10 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್‍ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಸಮಾರೋಪ ಸಮಾರಂಭವು ಏ.13 ರಂದು ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಪಾಟಿಬೆಟ್ಟದ ಟಾಟಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ರಿಪಬ್ಲಿಕ್ ಟಿವಿ ಮತ್ತು ಆರ್ ಕನ್ನಡ ವಿತರಣಾ ಅಧ್ಯಕ್ಷರು ಹಾಗೂ ಕೂರ್ಗ್ ಕ್ರಿಕೆಟ್ ಫೌಂಡೇಶನ್‍ನ ಮುಖ್ಯ ಮಾರ್ಗದರ್ಶಕ ಚೇರಂಡ ಕಿಶನ್ ಮಾದಪ್ಪ, ಕ್ಯೂರೆಮಾರ್ವೆಲ್ ನಿರ್ದೇಶಕಿ ಪೂಜಿತಾ ಉತ್ತಪ್ಪ, ಮಾಜಿ ಹಾಕಿ ಒಲಿಂಪಿಯನ್ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಸುಬ್ರಮಣಿ, ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕ ತೀತಿರ ರೋಶನ್ ಅಪ್ಪಚ್ಚು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಉದ್ಯಮಿ ಕುಪ್ಪಂಡ ಚಿಣ್ಣಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ, ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್ ಪಾಲ್ಗೊಳ್ಳಲಿದ್ದಾರೆ. ಕೊಡಗಿನ ಕ್ರೀಡಾ ಪ್ರತಿಭೆಗಳಿಗೆ ಲೆದರ್ ಬಾಲ್ ಕ್ರಿಕೆಟ್ ನಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಉದ್ದೇಶದಿಂದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ಏ.1 ರಿಂದ ಆರಂಭಿಸಿರುವ ಪಂದ್ಯಾವಳಿಯಲ್ಲಿ 10 ಪ್ರಾಂಚೈಸಿ ತಂಡಗಳ 175ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಕೊಡಗು ಮಾತ್ರವಲ್ಲದೆ ರಾಜ್ಯ ಮತ್ತು ಹೊರ ರಾಜ್ಯದ ಪ್ರತಿಷ್ಠಿತ ಆಟಗಾರರು ಕೂಡ ಪಂದ್ಯಗಳಲ್ಲಿ ಆಟವಾಡುತ್ತಿದ್ದಾರೆ. ಏ.13 ರಂದು ಸೀಸನ್-2ರ ವಿಜೇತರಿಗೆ ಪ್ರಥಮ ಬಹುಮಾನ 2 ಲಕ್ಷ, ದ್ವಿತೀಯ 1 ಲಕ್ಷ, ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ ಎಂದು ಕೂರ್ಗ್ ಕ್ರಿಕೆಟ್ ಫೌಂಡೇಶನ್ ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ.