






ಸುಂಟಿಕೊಪ್ಪ,ಏ.10 NEWS DESK : ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24ನೇ ಸಾಲಿನಲ್ಲಿ ಮುಖ್ಯ ಮಂತ್ರಿಗಳ ವಿಶೇಷನಿಧಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ಕಾಂಕ್ರಿಟ್ ರಸ್ತೆ ಕಾಮಗಾರಿ 93 ಲಕ್ಷ ರೂಗಳಲ್ಲಿ ನಿರ್ಮಿಸಲಾಗಿದೆ ಎಂದು ವಲಯ ಕಾಂಗ್ರೆಸ್ ಅಧ್ಯಕ್ಷ ಮೇದೂರ ಹರೀಶ್ ಸುಬ್ಬಯ್ಯ ತಿಳಿಸಿದ್ದಾರೆ. ಶಾಸಕ ಮಂತರ್‍ಗೌಡ ಪ್ರಯತ್ನದಿಂದ ಮಾದಾಪುರ ಮಠದ ರಸ್ತೆ 40 ಲಕ್ಷ ರೂ ವೆಚ್ಚದಲ್ಲಿ, ಚರ್ಚ್ ದೊಡ್ಡಿಬಾಣೆ ರಸ್ತೆ, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಕ್ರಿಟ್ ರಸ್ತೆ ಸೇರಿದಂತೆ 93 ಲಕ್ಷದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ. ಇದರಿಂದ ಈ ವಿಭಾಗದ ಜನತೆಯ ಬಹುದಿನದ ನಿರೀಕ್ಷೆಗೆ ಮನ್ನಣೆ ಸಿಕ್ಕಿದೆ ಎಂದು ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಪಿ.ಡಿ.ಅಂತೋಣಿ (ತಂಗಚ್ಚ)ವಲಯ ಕಾಂಗ್ರೆಸ್ ಕಾರ್ಯದರ್ಶಿ ನಾಸಿರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.