ಮಡಿಕೇರಿ NEWS DESK ಏ.11 : ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜ್ ದ್ವಿತೀಯ ಪಿಯುಸಿಯಲ್ಲಿ ಶೇ.100 ರಷ್ಟು ಫಲಿತಾಂಶ ಗಳಿಸಿದೆ. ಕಾಲೇಜು ಸ್ಥಾಪನೆಯಾದಾಗಿನಿಂದಲೂ ಶೇ.100 ರ ಸಾಧನೆ ಮಾಡುತ್ತಿರುವುದು ಈ ಕಾಲೇಜ್ ನ ಹೆಗ್ಗಳಿಕೆಯಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು.ವೈ. 594 ಅಂಕಗಳೊAದಿಗೆ ರಾಜ್ಯಕ್ಕೆ 6ನೇ ಸ್ಥಾನ, ಕ್ರಿಯೇಟಿವ್ ಸಹಭಾಗಿತ್ವದ ತ್ರಿಶಾ ಕಾಲೇಜಿನ ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊAದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ. 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್.ಎನ್ 590 ಅಂಕಗಳೊAದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ.ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 592 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಶೇ.97ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು ಶೇ.95ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. 557 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭೌತಶಾಸ್ತçದಲ್ಲಿ 7, ರಸಾಯನಶಾಸ್ತ್ರ 15, ಗಣಿತ 101, ಜೀವಶಾಸ್ತç 22, ಗಣಕ ವಿಜ್ಞಾನ 26, ಅರ್ಥಶಾಸ್ತç 2, ವ್ಯವಹಾರ ಅಧ್ಯಯನ 12, ಲೆಕ್ಕಶಾಸ್ತç 2, ಕನ್ನಡ 9, ಸಂಸ್ಕೃತ 76 ಹಾಗೂ ಹಿಂದಿಯಲ್ಲಿ 5 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳಿಸಿ ವಿಶೇಷ ಸಾಧನೆಗೈದಿದ್ದಾರೆ.
ಸಂಸ್ಥೆ ಪ್ರಾರಂಭವಾದ ಮೊದಲ ವರ್ಷದಿಂದಲೂ ಶೇಕಡಾ 100 ಫಲಿತಾಂಶ ದಾಖಲಿಸುವುದರೊಂದಿಗೆ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವೃಂದದವರು ಸಂತಸ ವ್ಯಕ್ತಪಡಿಸಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

