







ಮಡಿಕೇರಿ, ಏ, 12 NEWS DESK : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೇಂದ್ರ ಸರ್ಕಾರದ ವಿವಿಧ ಅನುದಾನಗಳಡಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿಯವರ ವಿಕಸಿತ ಭಾರತ ಯೋಜನೆಗೆ ಪೂರಕವಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರುಲಾಗುತ್ತಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶೇಖರಿಸಿರುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಸಂಸದರು ಮಾತನಾಡಿದರು. ಸ್ವಚ್ಛ ಭಾರತ ಮಿಷನ್ 2.0(ನಗರ) ಯೋಜನೆಯಡಿಯಲ್ಲಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಅನುದಾನ ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ತ್ಯಾಜ್ಯ ಸಂಗ್ರಹವಾಗಿದೆ. ಇದನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜನರು ಮನವಿ ಮಾಡಿದ್ದರು. ಜನರಿಗೆ ಆಗುತ್ತಿದ್ದ ತೊಂದರೆಯನ್ನು ಮನಗಂಡು ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಯದುವೀರ್ ವಿವರಿಸಿದರು. ಸುಮಾರು 12.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿಯನ್ನು ಆರಂಭಿಸಲಾಗಿದೆ. ಅತಿ ಶೀಘ್ರದಲ್ಲೇ ಇಲ್ಲಿನ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಯ ಕುರಿತು ನಿರಂತರ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದರು ತಿಳಿಸಿದರು.
ಎನ್‌ಡಿಆರ್‌ಎಫ್ ನಿಧಿಯಡಿ ರಸ್ತೆ ದುರಸ್ತಿ :: ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ಅನುದಾನ ಒದಗಿಸಲಾಗಿದೆ. ನಗರದಲ್ಲಿ ಬಹುತೇಕ ಎಲ್ಲ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಯದುವೀರ್ ವಿವರಿಸಿದರು.
ಕುಡಿಯವ ನೀರು ಪೂರೈಕೆಗೆ ಕ್ರಮ :: ಕಿತ್ತಳೆ ನಾಡು ಎಂದೇ ಪ್ರಸಿದ್ಧವಾಗಿರುವ ಕೊಡಗಿನಲ್ಲಿ ಕುಡಿಯುವ ನೀರು ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಮೃತ್ ಯೋಜನೆಯಡಿ ಮಡಿಕೇರಿ ನಗರದಲ್ಲಿ 46 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಸಂಪೂರ್ಣವಾಗಿ ಅನುಷ್ಠಾನಕ್ಕೆ ಬರಲಾಗಿದೆ. ಇದಕ್ಕಾಗಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ಹಾಗೂ ನಿರಂತರವಾಗಿ ಪರಿಶೀಲನೆ ನಡೆಸಿ ವರದಿಗಳನ್ನು ನೀಡಬೇಕು ಎಂದು ತಿಳಿಸಲಾಗಿದೆ. ಈ ಯೋಜನೆ ಕಾರ್ಯಗತಕ್ಕೆ ಬಂದರೆ ಮಡಿಕೇರಿಯ ಕುಡಿಯುವ ನೀರಿನ ಸಮಸ್ಯೆ ಸಂಪೂರ್ಣ ಪರಿಹಾರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಯದುವೀರ್ ತಿಳಿಸಿದರು.
ಪ್ರಧಾನಿ ಮೋದಿ ಆಶಯ ಸಾಕಾರಗೊಳಿಸಲು ಪಣ :: ಪಾಶ್ಚಾತ್ಯ ದೇಶಗಳಲ್ಲಿ ಜನರಿಗೆ ಎಲ್ಲ ರೀತಿಯ ಸೌಲಭ್ಯಗಳು ದಕ್ಕುತ್ತಿರುವಂತೆ ನಮ್ಮ ದೇಶದಲ್ಲೂ ಎಲ್ಲರಿಗೂ ಸಕಲ ಸೌಲಭ್ಯಗಳನ್ನು ಒದಗಿಸಬೇಕು ಎಂಬ ಆಶಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಅದಕ್ಕೆ ತಕ್ಕಂತೆ ನಮ್ಮ ಮಡಿಕೇರಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರಲಾಗಿದೆ. ಕ್ಷೇತ್ರದ ಎಲ್ಲೆಡೆಯೂ ಅಭಿವೃದ್ಧಿ ಕಾರ್ಯಗಳನ್ನು ಕಾಲಕ್ಕೆ ಕಾಲಕ್ಕೆ ಜಾರಿಗೆ ತಂದು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಜ್ಜಾಗಿದ್ದೇವೆ ಎಂದು ಸಂಸದರು ತಿಳಿಸಿದರು. ಕೇಂದ್ರ ಬಿಜೆಪಿ ಸರ್ಕಾರದ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಆಶಯಗಳಿಗೆ ತಕ್ಕಂತೆ ಹಾಗೂ ವಿಕಸಿತ ಭಾರತದ ಅಭಿಯಾನವನ್ನು ಸಾಕಾರಗೊಳಿಸಲು ನಾವೆಲ್ಲರೂ ಪಣತೊಟ್ಟಿದ್ದೇವೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.