









ನಾಪೋಕ್ಲು ಏ.12 NEWS DESK : ಪಾಲೂರು ಗ್ರಾಮದ ಶ್ರೀ ಪಾಲೂರಪ್ಪ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವವು ಏ.13 ರಿಂದ 19 ರವರೆಗೆ ನಡೆಯಲಿದೆ. ಏ.13 ರಂದು ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಗುವುದು. ಏ.14 ರಂದು ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವಬಲಿ ನಡೆಯಲಿದೆ. ಏ.16 ರಂದು ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನಡೆಯಲಿದೆ. ಏ.17ರಂದು ಹಗಲು ಉತ್ಸವಬಲಿ ನಡೆದು ಸಂಜೆ ದೀಪಾರಾಧನೆ ನಡೆಯಲಿದೆ. ಏ.18 ರಂದು ಪಟ್ಟಣಿಹಬ್ಬ ಜರುಗಲಿದೆ. ಬೆಳಗ್ಗೆ ತುಲಾಭಾರ, ಮಧ್ಯಾಹ್ನ ಎತ್ತು ಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಅಪರಾಹ್ನ ಜೋಡಿ ದೇವರ ನೃತ್ಯೋತ್ಸವ ನಡೆಯಲಿದೆ. ಪಾಲೂರಪ್ಪ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಒಳಪಡುವ ಕುಯ್ಯಂಗೇರಿ ನಾಡಿನ ಗ್ರಾಮಗಳಾದ ಪಾಲೂರು, ಹೊದ್ದೂರು, ಹೊದವಾಡ, ಕುಂಬಳದಾಳು, ಅರವತ್ತೋಕ್ಲು, ಬೆಟ್ಟಗೇರಿ, ಹೆರವನಾಡು, ಕಾರುಗುಂದ ಮತ್ತು ಕಡಿಯತ್ತೂರಿನ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಹಾಲಿಂಗೇಶ್ವರ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ.
ವರದಿ : ದುಗ್ಗಳ ಸದಾನಂದ.