

ಕುಶಾಲನಗರ, ಏ.12 NEWS DESK : ಬೆಳಗಾವಿ ತಾಂತ್ರಿಕ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಜಲ ದಿನಾಚರಣೆ: 2025 ರ ಅಂಗವಾಗಿ ಜಲ ಸಂರಕ್ಷಣಾ ಬೃಹತ್ ಅಭಿಯಾನ:2025 ನಡೆಸಲಾಯಿತು. ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಜಲ ಸಂರಕ್ಷಣಾ ಅಭಿಯಾನದ ಅಂಗವಾಗಿ ಎಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ಏರ್ಪಡಿಸಿದ್ದ ಜಲ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದ ಕಾಲೇಜಿನ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮನ್ನು ಜಲ ಸಂರಕ್ಷಣೆಗೆ ತೊಡಗಿಸಿಕೊಳ್ಳುವ ಕುರಿತಂತೆ ಗಿನ್ನಿಸ್ ರೆಕಾರ್ಡ್ ಗಾಗಿ ಸರ್ಕಾರದಿಂದ ಕೈಗೊಂಡಿದ್ದ ಜಲ ಸಂರಕ್ಷಣೆಯ ಗಿನ್ನಿಸ್ ರೆಕಾರ್ಡ್ ನ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ತಾವುಗಳು ಜಲ ಸಂರಕ್ಷಕರಾಗುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಇದೇ ವೇಳೆ ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಎಲ್ಲರೂ ಜತೆಗೂಡಿ, ತಾವುಗಳೆಲ್ಲರೂ “ನಾಳಿನ ಉತ್ತಮ ಭವಿಷ್ಯಕ್ಕಾಗಿ ‘ಜಲ ಸಂರಕ್ಷಣೆ” ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಒಕ್ಕೊರಲಿನಿಂದ ಪ್ರಮಾಣೀಕರಿಸಿದರು. ಜನ ಜಾಗೃತಿ ಆಂದೋಲನ ನಡೆಸಲಾಯಿತು. ಜಲ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿ ‘ಜಲ ಸಂರಕ್ಷಣೆ” ಕುರಿತು ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಕೆ.ಐ.ಪರಶಿವಮೂರ್ತಿ, ನೀರು ನಮ್ಮ ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ನೀರು ಎಂದರೆ ಜೀವನ. ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ನಾವುಗಳು ಭವಿಷ್ಯತ್ತಿನ ದೃಷ್ಟಿಯಿಂದ ಪ್ರಕೃತಿಯ ಅಮೂಲ್ಯ
ಸಂಪತ್ತಾದ ನೀರಿನ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ಜಲ ಸಂರಕ್ಷಣೆ ಅಭಿಯಾನದ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎನ್.ಎಸ್.ಸತೀಶ್, ಜಲ ಸಂರಕ್ಷಣೆಯ ಹಿನ್ನೆಲೆಯಲ್ಲಿ ಸರ್ಕಾರದ ಜಲ ಜಾಗೃತಿ ಅಭಿಯಾನದಂತೆ ಕಾಲೇಜಿನಲ್ಲಿ ಜಲ ಸಂರಕ್ಷಣೆಯ ಬೃಹತ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಜಲ ಸಂರಕ್ಷಣೆ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದರು. ನೀರಿನ ಮಾಲಿನ್ಯವನ್ನು ತಡೆಗಟ್ಟುವ ಕಡೆ ನಾವೆಲ್ಲರೂ ಹೆಚ್ಚಿನ ಗಮನಹರಿಸಬೇಕಿದೆ. ನೀರಿನ ಅಭಾವವನ್ನು ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ಭವಿಷ್ಯತ್ತಿನ ದೃಷ್ಠಿಯಿಂದ ನೀರಿನ ಸಂರಕ್ಷಣೆ ಮಾಡಬೇಕಿದೆ ಎಂದರು. ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಜಲ ಸಂರಕ್ಷಣೆ ಕುರಿತಂತೆ ಮಾಹಿತಿ ನೀಡಿ “ಜಲ ಸಂರಕ್ಷಣೆ” ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್,
ಇಂದು ನಾವು ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ,ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ
ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಇತ್ತೀಚಿನ ವರ್ಷಗಳಲ್ಲಿ ಮಳೆಯ ಏರಿಳಿತ, ಹವಾಮಾನ ವೈಪರೀತ್ಯದಿಂದ ಅಂತರ್ಜಲ ಕುಸಿದು ಜಲಮೂಲಗಳು ಕ್ಷೀಣಿ ಸಿವೆ. ಇದರಿಂದ ದಿನೇ ದಿನೇ ಕುಡಿ ಯುವ ನೀರಿನ ಸಮಸ್ಯೆ ಎದುರಾಗಿದೆ. ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಭವಿಷ್ಯದ ನೀರಿನ ಸಂರಕ್ಷಣೆಗೆ ಪೂರಕವಾಗಿ ಸಂಶೋಧನೆ ಮೂಲಕ ಉತ್ತಮ ಯೋಜನೆಗಳನ್ನು ತಯಾರಿಸಿ ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ.ಸೀನಪ್ಪ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮನ್ನು ಜಲ ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ವಿದ್ಯಾರ್ಥಿಗಳು ಜಲ ಸಂರಕ್ಷಣೆ-ನಮ್ಮೆಲ್ಲರ ಹೊಣೆ, ಜಲವೇ ಜೀವ ಜಲ, ನೀರನ್ನು ಮಿತವಾಗಿ ಬಳಸಿ-ಭವಿಷ್ಯ ಕ್ಕಾಗಿ ಉಳಿಸಿ, ಅಂತರ್ಜಲ ಸಂರಕ್ಷಣೆ ನಮ್ಮೆ ಲ್ಲರ ಹೊಣೆ, ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ ರಂಗನಾಥ್, ಡಾ.ಹೇಮಲತಾ, ಉಪನ್ಯಾಸಕರಾದ
ಸಹನಾ, ಪಿ.ಸಂಜೀವ, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.