








ಮಡಿಕೇರಿ ಏ.12 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ ಅಂತಿಮ ಪಂದ್ಯ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡಗಳ ನಡುವೆ ಏ.13 ರಂದು ನಡೆಯಲಿದೆ. ಇಂದು ನಡೆದ 12ನೇ ದಿನದ ಪಂದ್ಯದಲ್ಲಿ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ಮತ್ತು ಟೀಮ್ ಲಿವರೇಜ್ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಲಿವರೇಜ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 144 ರನ್‌ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 114 ರನ್‌ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು. ಟೀಮ್ ಲಿವರೇಜ್ ತಂಡದ ಅಂಜAಡ ಚೇತನ್ ಚಿಣ್ಣಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಏ.13 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡಗಳ ನಡುವೆ ರೋಚಕ ಫೈನಲ್ ಪಂದ್ಯ ನಡೆಯಲಿದೆ.