










ಮಡಿಕೇರಿ ಏ.13 NEWS DESK : ಕಕ್ಕಬೆ ವಯಕೋಲ್ ಪುಳಿಜೋಂ ಉರೂಸ್ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿಶೇಷ ಅತಿಥಿಯಾಗಿ ಭಾಗವಹಿಸಿದರು. ಉರುಸ್ ಆಚರಣೆಯ ಸದುದ್ದೇಶದ ಸಂದೇಶ ನಾಡಿನ ಎಲ್ಲೆಡೆ ಪಸರಿಸುವಂತಾಗಲಿ ಎಂದು ಶಾಸಕರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಂಗ್ರೆಸ್ ಪ್ರಮುಖರು ಹಾಜರಿದ್ದರು.