









ಮಡಿಕೇರಿ ಏ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಕಾವೇರಿ ಕಲಾಕ್ಷೇತ್ರದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳ ಹೊತ್ತ ರಥವು ವಿವಿಧ ಕಲಾತಂಡದೊಂದಿಗೆ ಮೆರವಣಿಗೆ ಸಾಗಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಬೇಬಿಮ್ಯಾಥ್ಯು, ನಗರಸಭೆ ಸದಸ್ಯರು, ಇಲಾಖಾಧಿಕಾರಿಗಳು, ದಲಿತ ಮುಖಂಡರು ಪಾಲ್ಗೊಂಡು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.