









ನಾಪೋಕ್ಲು ಏ.14 NEWS DESK : ಹಳೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಪೊರುಕುವಂಡ ಭಾಗ್ಯವತಿ (ಕಾಂತಿ) ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಶುಭ ಹಾರೈಸಿದರು. ನಾಪೋಕ್ಲು ಭಾಗಕ್ಕೆ ಭೇಟಿ ನೀಡಿದ ಶಾಸಕರು, ರಾಜ್ಯ ಪ್ರಶಸ್ತಿ ವಿಜೇತರಾದ ಭಾಗ್ಯವತಿ (ಕಾಂತಿ) ಅವರನ್ನು ಸನ್ಮಾನಿಸಿ, ತಮ್ಮ ವೃತ್ತಿಯಲ್ಲಿ ಮತ್ತಷ್ಟು ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಭಾಗ್ಯವತಿ ಅವರಿಗೆ ಇತ್ತೀಚೆಗೆ ರಾಜ್ಯ ಸರಕಾರದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಾಪೋಕ್ಲು ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಕೆಡಿಪಿ ಸದಸ್ಯ ಎಂ.ಹೆಚ್.ಅಬ್ದುಲ್ ರೆಹಮಾನ್, ಗ್ರಾಮ ಪಂಚಾಯತಿ ಸದಸ್ಯ ಕುಲ್ಲೇಟಿರ ಹೇಮಾ ಅರುಣ್ ಹಾಗೂ ನಾಯಕಂಡ ಮುತ್ತಪ್ಪ, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.