









ಕುಶಾಲನಗರ ಏ.14: NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ನವಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ರೂ. 50 ಲಕ್ಷ ಹಣ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಕೂಡ್ಲೂರು ಗ್ರಾಮದಲ್ಲಿ ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಬಸವೇಶ್ವರ ಯುವಕ ಸಂಘದ ವತಿಯಿಂದ ಏರ್ಪಡಿಸಿದ್ದ ಮೂರನೇ ವರ್ಷದ ಹೊನಲು ಬೆಳಕಿನ ಕಬಡ್ಡಿ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೂಡ್ಲೂರು ನವಗ್ರಾಮದ ಗ್ರಾಮಸ್ಥರ ಮನವಿ ಸ್ಪಂದಿಸಿರುವ ಶಾಸಕರು, ನವಗ್ರಾಮದಲ್ಲಿ ಸೂಕ್ತ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ . ಇದು ಈ ಗ್ರಾಮಸ್ಥರಿಗೆ ಸಂತಸದ ಸಂಗತಿಯಾಗಿದೆ ಎಂದು ವಿ.ಪಿ.ಶಶಿಧರ್ ಪ್ರತಿಕ್ರಿಯೆ ನೀಡಿದರು. ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಈರಪ್ಪ, ಯುವಕ ಸಂಘದ ಅಧ್ಯಕ್ಷ ಕೆ.ವಿ.ನಿಶಾಂತ್, ಸಂಘದ ಪದಾಧಿಕಾರಿಗಳು ಇದ್ದರು.