









ವಿರಾಜಪೇಟೆ ಏ.14 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ 134ನೇ ಜನ್ಮದಿನಾಚರಣೆಯನ್ನು ವಿರಾಜಪೇಟೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡು ಭವನದ ಮುಂಭಾಗದಲ್ಲಿ ನೂತನವಾಗಿ ಸ್ಥಾಪಿತಗೊಂಡಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಶಾಸಕರು, ಸಮಾಜದಲ್ಲಿ ನಾವು ಅಂಬೇಡ್ಕರ್ ತತ್ವ ಸಿದ್ಧಾಂತನಗಳನ್ನು ಅಳವಡಿಸಿ ಮುನ್ನಡೆಯುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು. ಇಂದು ನಾವುಗಳು ನಾಡಿನಲ್ಲಿ ಸುಖ ಶಾಂತಿಯಿಂದ ನಡೆಸುವಂಥಾಗಲು ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವೇ ಪ್ರಮುಖ ಕಾರಣ. ಭಾರತ ದೇಶದ ಕಾನೂನಾದ ನಮ್ಮ ಹೆಮ್ಮೆಯ ಸಂವಿಧಾನವನ್ನು ಎಲ್ಲರೂ ಗೌರವಿಸಿ ಅದರಂತೆ ನಡೆದುಕೊಳ್ಳುವುದು ನಮ್ಮ ಗುರಿಯಾಗಿ ಇರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರು ಹಾಗೂ ಹಾಗೂ ಪ್ರಮುಖರು ಉಪಸ್ಥಿತರಿದ್ದರು.