







ಮಡಿಕೇರಿ, ಏ.14 NEWS DESK : ನಗರದ ಅಶೋಕಪುರದ ಅನ್ನಪೂರ್ಣೇಶ್ವರಿ ಸಮುದಾಯ ಭವನ ಸಮಿತಿ, ಗಣಪತಿ ಉತ್ಸವ ಸಮಿತಿ ಹಾಗೂ ಅಂಬೇಡ್ಕರ್ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಮೆರವಣಿಗೆ ನಡೆಯಿತು. ನಗರದ ಮಂಗೇರಿರ ಮುತ್ತಣ್ಣ ವೃತ್ತದಿಂದ ಅಂಬೇಡ್ಕರ್ ಭವನದ ತನಕ ಅಲಂಕೃತ ರಥದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಯಿತು. ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಾಸಿಕ್ ಬ್ಯಾಂಡ್ ಮೆರವಣಿಗೆಯ ಆಕರ್ಷಣೆಯಾಗಿತ್ತು. ಅನ್ನಪೂರ್ಣೇಶ್ವರಿ ಸಮುದಾಯ ಭವನ ಸಮಿತಿ ಅಧ್ಯಕ್ಷ ಹೆಚ್.ಎಂ.ಜಯರಾಮ್, ಉಪಾಧ್ಯಕ್ಷ ಧರ್ಮೇಂದ್ರ, ಕಾರ್ಯದರ್ಶಿ ಜಯಪ್ರಕಾಶ್, ಅಂಬೇಡ್ಕರ್ ಭವನ ಸಮಿತಿ ಉಪಾಧ್ಯಕ್ಷ ಹೆಚ್.ಆರ್.ಮುತ್ತಪ್ಪ, ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಎಂ.ಜಿ. ಸುನಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.