







ಕುಶಾಲನಗರ, ಏ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಡಾ ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಭಾರತೀಯ ಬಹುಮುಖಿ ಪ್ರತಿಭೆಯ ಅವರ ದಾರ್ಶನಿಕ ವಿಧಾನಕ್ಕೆ ಹೆಸರುವಾಸಿಯಾದ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರಚಿಸಿದ ಸಮಾಜ ಸುಧಾರಕ, ಅವರ ನ್ಯಾಯಶಾಸ್ತ್ರಜ್ಞ ಮತ್ತು ಅರ್ಥಶಾಸ್ತ್ರಜ್ಞರ ಆಲೋಚನೆಗಳು ಎಲ್ಲರ ಮೇಲೆ ಪ್ರಭಾವ ಬೀರುತ್ತವೆ. ಸಮಾನತೆ ಮತ್ತು ಸಾಮಾಜಿಕ ಉನ್ನತೀಕರಣವನ್ನು ತರಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟದ್ದರು ಎಂದು ಹೇಳಿದರು. ಡಾ. ಅಂಬೇಡ್ಕರ್ ಅವರ ಜೀವನ, ದೇಶಕ್ಕೆ ಅವರ ಕೊಡುಗೆ ಮತ್ತು ಎಲ್ಲರಿಗೂ ನಿಜವಾದ ಸಮಾನ ಸಮಾಜವನ್ನು ಸಾಧಿಸುವ ಪರಿಹಾರದ ಅವಲೋಕನವನ್ನು ಒದಗಿಸುತ್ತದೆ ಎಂದರು. ಡಾ ಬಿ.ಆರ್ ಅಂಬೇಡ್ಕರ್ ಸರ್ವರಿಗೂ ಸಮಾನವಾಗಿ ಬದುಕು ಕಲ್ಪಿಸುವುದೇ ರಾಷ್ಟ್ರೀಯತೆ ಎಂದು ಕಂಡುಕೊಂಡಿದ್ದರು ಎಂದು ಪ್ರೇಮಕುಮಾರ್ ಹೇಳಿದರು. ಡಾ.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ಮಾತನಾಡಿದ ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ.ಗೀತಾ, ಡಾ ಅಂಬೇಡ್ಕರ್ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿವಾದದ ವಿರುದ್ಧ ಹೋರಾಡಿ ಶೋಷಿತರ ಪರವಾಗಿ ಧ್ವನಿ ಎತ್ತಿದರು ಎಂದರು.
ಸ್ವಾತಂತ್ರ್ಯ, ಸಮಾನತೆ ಹಾಗೂ ಸೌಹಾರ್ದತೆ ಬಗ್ಗೆ ಡಾ ಅಂಬೇಡ್ಕರ್ ಅವರ ಹೋರಾಟ ಮತ್ತು ಸಮಾನತೆಯ ನಿಜವಾದ ಮಾರ್ಗ ಎಂದು ಬಣ್ಣಿಸಿದರು. ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳು ಇದ್ದರು.