







ಮಡಿಕೇರಿ ಏ.15 NEWS DESK : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ವತಿಯಿಂದ ಏ.16 ರಂದು ಅರಣ್ಯ ಇಲಾಖೆಯೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ವಹಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್ ಭಾಗಿಯಾಗಲಿದ್ದಾರೆ.