







ಮಡಿಕೇರಿ ಏ.15 NEWS DESK : ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಏ.25 ಕೊನೆ ದಿನ ಎಂದು ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ಸದಸ್ಯರಾಗುವವರು ಕಡ್ಡಾಯವಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆಯದಿದ್ದರೇ ಕ್ಲಬ್‍ನ ಆಜೀವ ಸದಸ್ಯತ್ವ ಮತ್ತು ಸಾಮಾನ್ಯ ಸದಸ್ಯತ್ವ ರದ್ದಗಲಿದೆ. ಏ.28 ರಂದು ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಸದಸ್ಯತ್ವ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.