







ಮಡಿಕೇರಿ ಏ.15 NEWS DESK : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಶಿವಮೊಗ್ಗ ನೇತೃತ್ವದ ಕೊಡಗು ಜಿಲ್ಲಾ ಸಮಿತಿಯಿಂದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಅಂಗವಾಗಿ ಪುಷ್ಪ ನಮನ ಸಲ್ಲಿಸಲಾಯಿತು. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರಾಜಪೇಟೆ ತಾಲ್ಲೂಕು ಹಾಗೂ ಪೊನ್ನಂಪೇಟೆ ತಾಲ್ಲೂಕು ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಮಿತಿಯ ಸಂಚಾಲಕಿ ಗಾಯತ್ರಿ ನರಸಿಂಹ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಬೆಂಗಳೂರಿನ ಡಾ.ಬಾಬು ಜಗಜೀವನ್ ರಾಮ್ ಸಂಶೋಧನಾ ಕೇಂದ್ರ ಸುಮನಹಳ್ಳಿ ಮಾಗಡಿರಸ್ತೆಯಲ್ಲಿ ಏ.23 ರಂದು ನಡೆಯಲಿರುವ ‘ಕೋಮುವಾದ ಧಿಕ್ಕರಿಸಿ, ಸಂವಿಧಾನ ರಕ್ಷಿಸಿ ದಲಿತರ ಅಭಿವೃದ್ಧಿಗಾಗಿ’, “ಜನಕ್ರಾಂತಿ ಸಮಾವೇಶ” ಬೆಂಗಳೂರು ಚಲೋ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ದಲಿತ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವೀಗೊಳಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.