






ಸುಂಟಿಕೊಪ್ಪ NEWS DESK ಏ.15 : ಕಂಬಿಬಾಣೆಯ ಕಾಫಿ ತೋಟವೊಂದರಲ್ಲಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ. ಸೋಲಾರ್ ತಂತಿ ಸ್ಪರ್ಷಗೊಂಡು ಆನೆ ಸಾವನ್ನಪ್ಪಿರಬಹುದೆಂದು ಸಂಶಯ ವ್ಯಕ್ತವಾಗಿದೆ. 20 ವರ್ಷದ ಹೆಣ್ಣಾನೆಯ ಮೃತದೇಹ ಕೊಳೆತು ದುರ್ವಾಸನೆ ಬರುತ್ತಿದ್ದು, ಒಂದು ವಾರದ ಹಿಂದೆ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿದು ಬರಲಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್‌ಎಫ್‌ಓ, ಸಿಬ್ಬಂದಿಗಳು, ಡಿವೈಎಸ್‌ಪಿ ಗಂಗಾಧರಪ್ಪ, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.