






ಸುಂಟಿಕೊಪ್ಪ ಏ.16 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಂಯುಕ್ತಾಶ್ರಯದಲ್ಲಿ ಮೇ 10 ಮತ್ತು 11 ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಸುಂಟಿಕೊಪ್ಪ ಜಿಯಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ತೀರ್ಮಾನಿಸಿದೆ. ಸುಂಟಿಕೊಪ್ಪ ಸಂತಮೇರಿ ಶಾಲಾ ಸಭಾಂಗಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಜಿಯಂಪಿ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ರೋಮನ್ ಕ್ಯಾಥೋಲಿಕ್ 14ನೇ ವರ್ಷದ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಸ್ಥಾಪಕ ಅಧ್ಯಕ್ಷ ವಿ.ಎ.ಲಾರೆನ್ಸ್, ಉಪಾಧ್ಯಕ್ಷ ಜೋಕಿಂವಾಸ್, ಖಜಾಂಚಿ ಜೇಮ್ಸ್ ಡಿಸೋಜ, ಕ್ರೀಡಾ ಕಾರ್ಯದರ್ಶಿ ಪ್ರಭು, ದಾಸ್, ನಿಕಟಪೂರ್ವ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ, ಪಿಲಿಫ್‍ವಾಸ್, ಅಂತೋಣಿ ಡಿಸೋಜ, ಸುಂಟಿಕೊಪ್ಪ ದೇವಾಲಯ ಪಾಲನಾ ಸಮಿತಿ ಕಾರ್ಯದರ್ಶಿ ಡೆನ್ನಿಸ್ ಡಿಸೋಜ, ಪಿ.ಎಫ್.ಸಬಾಸ್ಟೀನ್, ರೋಸ್‍ಮೇರಿ ರಾಡ್ರಿಗಸ್, ಗ್ರೇಸಿ ಮತ್ತಿತರರು ಇದ್ದರು.