






ಮಡಿಕೇರಿ ಏ.16 NEWS DESK : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಂತರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ, ಜಿಲ್ಲಾ ಜಮಾಯತ್ ಉಲಾಮ ಅಧ್ಯಕ್ಷರಾದ ಸೈಯದ್ ಶಿಹಾಬುದ್ಧೀನ್ ಹೈದ್ರೂಸಿ, ಜಿಲ್ಲಾ ಉಲಾಮ ಅಧ್ಯಕ್ಷ ಕಿಲ್ಲೂರು ತಂಙಳ್, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಎಂ.ಬಿ.ಹಮೀದ್, ಯೂಸುಫ್ ಹಾಜಿ ಎಮ್ಮೆಮಾಡು, ವಿಟ್ಲದ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ , ಸಮಿತಿಯ ಉಪಾಧ್ಯಕ್ಷರಾದ ಕೆ.ಎ.ಯಾಕುಬ್, ಪಿ.ಎಂ.ಲತೀಫ್, ಕಾರ್ಯದರ್ಶಿಗಳಾದ ಅಬ್ದುಲ್ ಹಫೀಜ್ ಹಾಜಿ, ಉಮ್ಮರ್ ಫೈಝಿ, ಖಜಾಂಚಿ ಮಹಮ್ಮದ್ ಹಾಜಿ ಕುಂಜಿಲ, ಮಾಧ್ಯಮ ಸಂಚಾಲಕ ಸಿ.ಎಂ.ಹಮೀದ್ ಮೌಲವಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.