






ಮಡಿಕೇರಿ ಏ.16 NEWS DESK : ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಏ.18 ಮತ್ತು 19ರಂದು ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ನಡೆಯಲಿದೆ. ಕೇರಳದ ಶ್ರೀ ಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಏ.18ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆಯಾಗಲಿದೆ. ಸಂಜೆ ದೇವಾಲಯ ಸಮಿತಿ ವತಿಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ ಹಾಗೂ ಶ್ರೀ ಮುತ್ತು ಮಾರಿಯಮ್ಮ ದೇವಿಯ ಮೂಲ ವಿಗ್ರಹಗಳಿಗೆ ಸ್ವರ್ಣ ಕಾಸಿನ ಮಾಲೆಯನ್ನು ಸಮರ್ಪಿಸಲಾಗುವುದು. ಏಪ್ರಿಲ್ 19 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಮಹಾ ಗಣಪತಿ ಹೋಮ, ಐಕ್ಯಮತ್ಯ ಸುಕ್ರದ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಮತ್ತು ಮಹಾ ಮಂಗಳಾರತಿ ನೆರವೇರಲಿದೆ. ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯಾಗಲಿದೆ.