Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ : ಸಂಘಟಿತ ಹೋರಾಟಕ್ಕೆ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ : ಸಂಘಟಿತ ಹೋರಾಟಕ್ಕೆ ಕರೆ*

ಏಪ್ರಿಲ್ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.16 NEWS DESK : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ ಹಾಗೂ ಜಿಲ್ಲಾ ಜಮಾಯತ್ ಉಲಮಾ ಅಧ್ಯಕ್ಷ ಸೈಯ್ಯದ್ ಶಿಹಾಬುದ್ದೀನ್ ಹೈದ್ರೋಸಿ ಅವರುಗಳ ನೇತೃತ್ವದಲ್ಲಿ, ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಗೆ ಪ್ರತಿಭಟನಾಕಾರರು ತೀವ್ರ ವಿರೋಧ ವ್ಯಕ್ತಪಡಿಸಿದರು. ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದೆಂದು ಒತ್ತಾಯಿಸಿದರು. ಗಾಂಧಿ ಮೈದಾನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲಾ ಫೈಝಿ, ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಲ್ಲಿ ಅದು ಮುಸ್ಲಿಂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುತ್ತದೆ. ಅಲ್ಲದೆ ದೇವರ ಹೆಸರಿನಲ್ಲಿ ವಕ್ಫ್‍ಗೆ ನೀಡಿದ ಆಸ್ತಿಯ ಸಂರಕ್ಷಣೆಗೆ ತೊಡಕು ಎದುರಾಗಲಿದೆ ಎಂದರು. ವಿಟ್ಲ ಕ್ಷೇತ್ರದ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಮಾತನಾಡಿ, ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸಂಘಟಿತ ಹೋರಾಟ ಅಗತ್ಯವೆಂದರು. ಸುನ್ನಿ ಸಮನ್ವಯ ಸಮಿತಿಯ ಮಾಧ್ಯಮ ಸಂಚಾಲಕ ಸಿ.ಎಂ.ಹಮೀದ್ ಮೌಲವಿ ಮಾತನಾಡಿ, ವಕ್ಫ್ ಅಧೀನದಲ್ಲಿ ರಾಜ್ಯ ವ್ಯಾಪಿ ಸುಮಾರು 6 ಲಕ್ಷ ಏಕರೆ ಆಸ್ತಿ ಇದೆ. ಈ ಎಲ್ಲಾ ಆಸ್ತಿಗಳು ದೇವರ ಹೆಸರಿನಲ್ಲಿ ದಾನವಾಗಿ ನೀಡಿದ ಜಾಗವಾಗಿದೆ. ಮಸೀದಿ, ಮದ್ರಸಗಳು ಇಂತಹ ಜಾಗವನ್ನು ಹೊಂದಿಕೊಂಡಿವೆ. ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆಯ ಮೂಲಕ, ಇಂತಹ ಆಸ್ತಿಯ ಮೇಲಿನ ಹಕ್ಕನ್ನು ಕಳೆದುಕೊಳ್ಳುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರು ಒಗ್ಗಟ್ಟಾಗಿ ಕಾಯ್ದೆಯ ಜಾರಿಗೆ ಅವಕಾಶವನ್ನು ನೀಡಬಾರದೆಂದು ಹೇಳಿದರು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಯಾಗದಂತೆ ತಡೆಯಲು ನಾವೆಲ್ಲರು ಕಟಿಬದ್ಧರಾಗಿ ಮತ್ತಷ್ಟು ದೊಡ್ಡ ಹೋರಾಟ ರೂಪಿಸಬೇಕಾಗಿದೆ. ಸಂಕಷ್ಟ ನಮ್ಮೆದುರಿಗೆ ಬಂದು ನಿಂತಿದ್ದರು ನಮ್ಮ ಸಮುದಾಯ ಇನ್ನೂ ಜಾಗೃತವಾಗಿಲ್ಲ. ಇನ್ನಾದರು ವಿಷಯದ ಗಂಭೀರತೆಯನ್ನು ಅರಿತು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ವಕ್ಫ್‍ಗೆ ಸಂಬಂಧಿಸಿದ ಸುಮಾರು 6.50 ಲಕ್ಷ ಮತ್ತು ದೇಶದಾದ್ಯಂತ 38 ಲಕ್ಷ ಏಕರೆ ಜಾಗವಿದೆ. ಈ ಆಸ್ತಿಯನ್ನು ವಕ್ಫ್‍ಗೆ ಇಲ್ಲದಂತೆ ಮಾಡುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ಮುಂದಾಗಿದೆ ಎಂದು ಆರೋಪಿಸಿದರು. ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲವೆಂದು ಈಗಾಗಲೆ ನೆರೆಯ ಕೇರಳ, ತಮಿಳುನಾಡು ರಾಜ್ಯಗಳು ತಿಳಿಸಿವೆ. ಅದೇ ರೀತಿ ಕರ್ನಾಟಕದ ಮುಖ್ಯಮಂತ್ರಿಗಳು ಕೂಡ ಅಲ್ಪಸಂಖ್ಯಾತರ ಹಿತಕಾಪಾಡಲಿದ್ದಾರೆ ಎಂದರು.

::: ಜಿಲ್ಲಾಧಿಕಾರಿಗಳಿಗೆ ಮನವಿ ::: ಗಾಂಧಿ ಮೈದಾನದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮೂಲಕ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿಯ ಪ್ರಮುಖರು ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದೆ. ಈ ಹಿನ್ನೆಲೆ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ, ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಬೇಕು ಮತ್ತು ಮುಸ್ಲಿಂ ಕಾನೂನು ಪಂಡಿತರು, ಸಮುದಾಯದ ಪ್ರತಿನಿಧಿಗಳೊಂದಿಗೆ ವಿಸ್ತೃತವಾದ ಚರ್ಚೆಗಳನ್ನು ಮಾಡಬೇಕು.  ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನದ ಮೂಲಭೂತ ಹಕ್ಕುಗಳಿಗೆ ಚ್ಯುತಿಯನ್ನುಂಟುಮಾಡಿದೆ. ವಕ್ಫ್ ಆಸ್ತಿ ಎನ್ನುವುದು ಪ್ರಮುಖವಾಗಿ ಸಮುದಾಯದ ಬಡ ಮಂದಿಯ ಕಲ್ಯಾಣ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮೀಸಲಾಗಿದೆ. ತಿದ್ದುಪಡಿ ಕಾಯ್ದೆ ಇದಕ್ಕೆ ಅಡ್ಡಿಯನ್ನುಂಟು ಮಾಡುತ್ತದೆಂದು ಹಾಗೂ ವಕ್ಫ್ ಆಡಳಿತದಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದು  ವಕ್ಫ್ ನ ಧಾರ್ಮಿಕ ಚಟುವಟಿಕೆಗಳ ನಡುವಿನ ನೇರ ಹಸ್ತಕ್ಷೇಪವಾಗಿದೆ. ವಕ್ಫ್ ಎನ್ನುವುದು ಕೇವಲ ಆಡಳಿತಾತ್ಮಕವಾದ ವಿಚಾರವಲ್ಲ. ಇದು ಮುಸ್ಲಿಂ ಸಮುದಾಯ ಬಾಂಧವರ ಪವಿತ್ರ ಭಾವನೆಯೆ ಆಗಿದೆ. ಇಂತಹ ಭಾವನೆಗಳಿಗೆ ವಕ್ಫ್ ತಿದ್ದುಪಡಿ ಕಾಯ್ದೆ ಧಕ್ಕೆಯನ್ನುಂಟುಮಾಡಲಿದೆ ಎಂದು ಮನವಿ ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಪ್ರತಿಭಟನೆಯಲ್ಲಿ ಜಿಲ್ಲಾ ಉಲಮಾ ಅಧ್ಯಕ್ಷ ಕಿಲ್ಲೂರು ತಂಞಳ್, ಸುನ್ನಿ ಸಮನ್ವಯ ಸಮಿತಿಯ ಉಪಾಧ್ಯಕ್ಷರಾದ ಕೆ.ಎ.ಯಾಕುಬ್, ಪಿ.ಎಂ.ಲತೀಫ್, ಖಜಾಂಚಿ ಮಹಮ್ಮದ್ ಹಾಜಿ ಕುಂಜಿಲ, ಕಾರ್ಯದರ್ಶಿ ಉಮ್ಮರ್ ಫೈಝಿ, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಎಂ.ಬಿ.ಹಮೀದ್, ಪಿ.ಎ.ಯೂಸುಫ್ ಹಾಜಿ ಎಮ್ಮೆಮಾಡು ಸೇರಿದಂತೆ ಮುಸ್ಲಿಂ ಸಮುದಾಯದ ಹಲವು ಪ್ರಮುಖರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.05: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಂಪ್‌ಗಳು ವಾಹನ ಚಾಲಕರಿಗೆ ಸರಿಯಾಗಿ ಗೋಚರಿಸದೆ ಸರಣಿ…

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.