Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವ : ಏಕಕಾಲಕ್ಕೆ 7776 ಗೆಜ್ಜೆಗಳ ನಿನಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವ : ಏಕಕಾಲಕ್ಕೆ 7776 ಗೆಜ್ಜೆಗಳ ನಿನಾದ*

ಏಪ್ರಿಲ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DEWSK  : ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವವವು ಸಂಭ್ರಮದಿಂದ ನಡೆಯಿತು. ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಭರತನಾಟ್ಯ ಕಲಾವಿದೆ ಮಿಲನ ಭರತ್ ಹಾಗೂ ಯೋಗ ಗುರು ಶಿಲ್ಪ ರವೀಂದ್ರ ರೈ  ಉದ್ಘಾಟಿಸಿದರು. ಬಳಿಕ ಮಾತನಾಡಿದ ಮಿಲನಾ ಭರತ್, ಒಂದು ನಾಟ್ಯಶಾಲೆಯನ್ನು ಸ್ಥಾಪಿಸುವುದು ಸುಲಭದ ವಿಷಯವಲ್ಲ, ತಾನು ಕಲಿತು ಬಳಿಕ ಇತರರಿಗೆ ಆ ವಿದ್ಯೆಯನ್ನು ಧಾರೆಯೆರೆಯಬೇಕಾಗಿರುತ್ತದೆ, ಇದಕ್ಕೆ ಬಹಳ ಆತ್ಮಸ್ಥೈರ್ಯದ ಅಗತ್ಯವಿರುತ್ತದೆ. ಕಾವ್ಯಶ್ರೀ ಅವರು ಎಲ್ಲವನ್ನೂ ಮೀರಿ ಈ ಶಾಲೆಯನ್ನು ಕಟ್ಟಿದ್ದಾರೆ ಅವರ ಸಾಧನೆ ನಿಜಕ್ಕೂ ಅಭಿನಂದನೀಯ ಎಂದರು.  ಶಿಲ್ಪಾ ರವೀಂದ್ರ ರೈ ಮಾತನಾಡಿ, ಇಂದು ಭಾರತೀಯ ನೃತ್ಯಕಲೆ ಕಲಿಯುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ, ಜನರು ಆಸಕ್ತಿ ಕಳೆದುಕೊಳ್ಳುತ್ತಿರುವುದು ಇದಕ್ಕೆ ಮೂಲ ಕಾರಣ. ಆದರೆ ಕಾವ್ಯಶ್ರೀ ಅವರು ದಕ್ಷಿಣ ಭಾರತದ ಪ್ರಮುಖ ನೃತ್ಯ ಪ್ರಕಾರವಾದ ಭರತನಾಟ್ಯದ ಮೇಲಿಟ್ಟಿರುವ ಗೌರವ, ಅಭಿಮಾನ  ನಿಜಕ್ಕೂ ಮೆಚ್ಚುವಂತದ್ದು. ಈ ನೃತ್ಯಶಾಲೆ ಸ್ಥಾಪಿಸಲು ಅವರು ಅಂದು ಇಟ್ಟ ದಿಟ್ಟ ಹೆಜ್ಜೆ ಇಂದು ಹೆಮ್ಮರವಾಗಿದೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಹಾರೈಸಿದರು. ಕಳೆದ ಏಳು ವರ್ಷಗಳಲ್ಲಿ ಕಲಾಕಾವ್ಯ ನಾಟ್ಯಶಾಲೆ ನಡೆದುಬಂದ ಹಾದಿಯ ಕುರಿತು ವಿದೂಷಿ ಕಾವ್ಯಶ್ರೀ ಕಪಿಲ್  ಪ್ರಾಸ್ತಾವಿಕವಾಗಿ ಮಾತನಾಡಿ, ಕಲಾಕಾವ್ಯ ನಾಟ್ಯಶಾಲೆ ಆರಂಭವಾದಲ್ಲಿಂದ ಇಲ್ಲಿಯವರೆಗೆ ಇದ್ದ ಸವಾಲುಗಳು, ಏಳುಬೀಳುಗಳು ಹಾಗೂ ತಮಗಿದ್ದಂತಹ ಯೋಜನೆ, ಯೋಚನೆಗಳನ್ನು ಹಂಚಿಕೊಂಡರು, ಇಂದಿನ ಯುವಜನತೆ ಸಂಸ್ಕೃತಿದತ್ತವಾಗಿ ಬಂದ ಕಲಾ ಪ್ರಕಾರಗಳನ್ನು ತ್ಯಜಿಸಿ ಆಧುನಿಕ ನೃತ್ಯ ಕಲೆಗಳಿಗೆ ಪ್ರಾಮುಖ್ಯತೆ ಕೊಡುತ್ತಿದ್ದಾರೆ, ಆದರೆ ಭಾರತೀಯ ಸಂಸ್ಕೃತಿಯನ್ನು ಸದಾ ಉನ್ನತಿಗೆ ಕೊಂಡೊಯ್ಯುವುದು ಇಲ್ಲಿನ ಭರತನಾಟ್ಯದಂತಹ ಕಲಾ ಪ್ರಕಾರಗಳು, ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕೃತಿಯ ಹಿರಿಮೆಯನ್ನು ಧಾರೆಯೆರೆಯಬೇಕಿದೆ ಎಂದರು. ತಮ್ಮ ಈ ನೃತ್ಯಶಾಲೆಯ ಯಶಸ್ಸಿನ ಜೊತೆ ಬೆಂಬಲವಾಗಿ ನಿಂತ ತಮ್ಮ ಕುಟುಂಬದ ಕುರಿತು ಸಂತಸ ವ್ಯಕ್ತಪಡಿಸಿದರು. ಕಲಾಕಾವ್ಯ ನಾಟ್ಯಶಾಲೆಯ ವಿದ್ಯಾರ್ಥಿಗಳು ಸಾಧನೆಯಲ್ಲಿ ಸದಾ ಮುಂದು, ಈ ವರ್ಷ ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ನಡೆಸಿದ ಭರತನಾಟ್ಯ ಪರೀಕ್ಷೆಯಲ್ಲಿ ಕಲಾಕಾವ್ಯ ನಾಟ್ಯಶಾಲೆಯ ವಿದ್ಯಾರ್ಥಿ ಮಂಡೀರ ಯುಕ್ತಾನ್ ನೀಲಮ್ಮ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಐದು  ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಇತರ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಅವರನ್ನು ಗೌರವಿಸಲಾಯಿತು.  ನಾಟ್ಯಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ  ಹದಿನೆಂಟು ನೃತ್ಯಗಳ ವೈಭವ ನೆರೆದ ಜನರ ಕಣ್ಮನಗಳನ್ನು ತಣಿಸಿತು. ತೊಂಭತ್ತಾರು ಮಕ್ಕಳ 7,776 ಗೆಜ್ಜೆಯ ನಾದ ಹೊಸ ಲೋಕವನ್ನೇ ಸೃಷ್ಟಿಸಿದಂತಿತ್ತು. ಕಾರ್ಯಕ್ರಮದಲ್ಲಿ ದುಗ್ಗಳ ಕಪಿಲ್, ಸೂರ್ತಲೆ ಸೋಮಣ್ಣ, ನವೀನ್ ಅಂಬೆಕಲ್ಲು, ತಹಶೀಲ್ದಾರ್ ಪ್ರವೀಣ್, ರೋಟರಿ ಮಿಸ್ಟ್ ಹಿಲ್ಸ್ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ಹಾಜರಿದ್ದರು. ಆನಂದ್ ಕೊಡಗು ಕಾರ್ಯಕ್ರಮವನ್ನು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.05: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಂಪ್‌ಗಳು ವಾಹನ ಚಾಲಕರಿಗೆ ಸರಿಯಾಗಿ ಗೋಚರಿಸದೆ ಸರಣಿ…

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.