






ಮಡಿಕೇರಿ ಏ.17 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪತ್ರಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆ ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ 5419 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5411 ಪ್ರಕರಣಗಳು ಇತ್ಯರ್ಥ ಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 301 ಪ್ರಕರಣಗಳು ದಾಖಲಾಗಿ, 293 ಪ್ರರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 8 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 12,00,500 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಕೆ.ಎಸ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880985939 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.