
ನಾಪೋಕ್ಲು ಏ.18 NEWS DESK : ಕೊಳಕೇರಿ ಗ್ರಾಮದ ಮೂಟೇರಿ ಶ್ರೀ ಉಮಾಮಹೇಶ್ವರಿ ದೇವರ ವಾರ್ಷಿಕ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಣೆ ನೆರವೇರಿತು. ಉತ್ಸವದ ಅಂಗವಾಗಿ ಪಟ್ಟಣಿ ಹಬ್ಬದಂದು ಭಕ್ತರು ದೇವಾಲಯದಲ್ಲಿ ದೇವರ ಪ್ರದರ್ಶನ ನೃತ್ಯ ಬಲಿಯನ್ನು ವೀಕ್ಷಿಸಿ ಕಣ್ತುಂಬಿಕೊಂಡು ತಮ್ಮ ಇಷ್ಟಾರ್ಥ ಸೇವೆ ಹರಕೆ ಕಾಣಿಕೆ ಒಪ್ಪಿಸಿ ಪ್ರಸಾದವನ್ನು ಸ್ವೀಕರಿಸಿದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ತಕ್ಕ ಮುಖ್ಯಸ್ಥರು ಹಾಗೂ ವಿವಿಧ ಗ್ರಾಮದ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ : ದುಗ್ಗಳ ಸದಾನಂದ









