ಸುಂಟಿಕೊಪ್ಪ ಏ.21 NEWS DESK : ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾವರಣದಲ್ಲಿ ವಿವಿಧ ಸಾಂಘ್ಯಗಳ ಮೂಲಕ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್, ಕನ್ಯಾಸ್ತ್ರೀಯರು ಹಾಗೂ ಕ್ರೈಸ್ತ ಭಾಂದವರು ಶ್ರದ್ಧಾಭಕ್ತಿಯಿಂದ ನೆರವೇರಿಸುವ ಮೂಲಕ ಪರಸ್ಪರ ಶುಭಾಶಯಗಳನ್ನು ವಿನಿವiಯ ಮಾಡಿಕೊಂಡು ಈಸ್ಟರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಪುನರುತ್ಥಾನ ಹಬ್ಬದ ಅಂಗವಾಗಿ ಶನಿವಾರ ರಾತ್ರಿ ಸಂತ ಮೇರಿ ಶಾಲಾವರಣದಲ್ಲಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ರೇ.ಪಾ.ವಿಜಯಕುಮಾರ್ ನೂತನ ಬೆಂಕಿಯನ್ನು ಆರ್ಶಿವಚಿಸಿ, ಜೇನುಮೇಣದಿಂದ ತಯಾರಿಸಲಾದ ದೊಡ್ಡ ಮೊಂಬತ್ತಿಯನ್ನು ಆರ್ಶಿವಚಿಸಿ ಸಂತ ಮೇರಿ ಶಾಲಾವರಣದಿಂದ ಅದನ್ನು ಬೆಳಗಿಸಿಕೊಂಡು ಮೆರವಣಿಗೆಯೊಂದಿಗೆ ಪೀಠದಲ್ಲಿ ತಂದು ಗುರುಗಳು ಪ್ರತಿಷ್ಠಾಪಿಸಿ ಆಚರಣೆಗೆ ಮುನ್ನುಡಿಯನ್ನು ಇಡಲಾಯಿತು. ನಂತರ ನಡೆದ ಪ್ರಾರ್ಥನಾ ಕೂಟ ಹಾಗೂ ಆಡಂಬರ ದಿವ್ಯ ಬಲಿಪೂಜೆಯಲ್ಲಿ ಮರಣಹೊಂದಿದ ಸಮಾಧಿಗೊಳಿಸಲಾದ ಯೇಸುವು ಸಮಾಧಿಯಿಂದ ಪುನರ್‍ತ್ಥಾನಗೊಂಡಿರುವ ರೂಪಕ ದೃಶ್ಯದ ಅಂಗವಾಗಿ ಪ್ರಭು ಕ್ರಿಸ್ತರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಬಲಿಪೂಜೆಯನ್ನು ಸಮರ್ಪಿಸಿದರು.











