
ಮಡಿಕೇರಿ ಏ.22 NEWS DESK : ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಸದಾಶಿವ ರೆಡ್ಡಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ನಗರದ ನ್ಯಾಯಾಲಯದ ಮುಂಭಾಗದಲ್ಲಿ ಜಮಾಯಿಸಿ ವಕೀಲರು ಮೌನ ಪ್ರತಿಭಟನೆ ನಡೆಸಿದರು. ಕೃತ್ಯ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಕೀಲರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಆಗ್ರಹಿಸಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಕಾರ್ಯದರ್ಶಿ ಡಿ.ಎಂ.ಕೇಶವ್, ಸಂಘದ ಪದಾಧಿಕಾರಿಗಳು ಮತ್ತು ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









