
ಮಡಿಕೇರಿ ಏ.22 NEWS DESK : ಪೊನ್ನಂಪೇಟೆ ತಾಲ್ಲೂಕಿನ, ತಿತಿಮತಿ ಭಾಗದಲ್ಲಿರುವ ಚಿನಿಹಾಡ್ಲು ಹಾಡಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ.ಎಸ್ ಪೊನ್ನಣ್ಣ ಭೇಟಿ ನೀಡಿ ಪ್ರತಿಯೊಬ್ಬರ ಅಹವಾಲುಗಳನ್ನು ಆಲಿಸಿದರು. ಹಾಡಿಯ ಜನರಿಗೆ ರಸ್ತೆ, ವಿದ್ಯುಚ್ಛಕ್ತಿ ಹಾಗೂ ನೀರಿನ ಸಮಸ್ಯೆ ಇದ್ದು, ಇದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಅನುಮತಿ ನೀಡದೆ ತೊಡಕು ಮಾಡುತ್ತಿದ್ದಾರೆ ಎಂದು ನಿವಾಸಿಗಳು ತಮ್ಮ ನೋವನ್ನು ಶಾಸಕರಲ್ಲಿ ಹೇಳಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಹಾಡಿಯ ಜನರ ಬೇಡಿಕೆಗೆ ಪೂರಕವಾಗಿ ಸ್ಪಂದಿಸುವುದರೊಂದಿಗೆ ಹಾಡಿಯ ಜನರ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ನವೀನ್, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.










