Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದ ಅಕ್ಕನ ಬಳಗದಿಂದ ಅಕ್ಕಮಹಾದೇವಿ ಜಯಂತಿ ಆಚರಣೆ : ಅಕ್ಕಮಹಾದೇವಿ ಆದರ್ಶಗಳು ಎಂದಿಗೂ ದಾರಿದೀಪ : ಲಾಳನಹಳ್ಳಿ ಶಿವಶರಣೆ ಅಕ್ಕಾ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದ ಅಕ್ಕನ ಬಳಗದಿಂದ ಅಕ್ಕಮಹಾದೇವಿ ಜಯಂತಿ ಆಚರಣೆ : ಅಕ್ಕಮಹಾದೇವಿ ಆದರ್ಶಗಳು ಎಂದಿಗೂ ದಾರಿದೀಪ : ಲಾಳನಹಳ್ಳಿ ಶಿವಶರಣೆ ಅಕ್ಕಾ ಅಭಿಮತ*

ಏಪ್ರಿಲ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಏ.24 NEWS DESK :  ಹನ್ನೆರಡನೇ ಶತಮಾನದ ವಚನಗಾರ್ತಿ ಅಕ್ಕಾಮಹಾದೇವಿ ಈ ನಾಡು ಕಂಡ ಶ್ರೇಷ್ಟ ಶಿವಶರಣೆಯಾಗಿದ್ದು ಸೂರ್ಯ ಚಂದ್ರರು ಇರುವ ತನಕ ಅಕ್ಕನ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಲಿವೆ ಎಂದು ಕೆ.ಆರ್.ನಗರ ತಾಲ್ಲೂಕು ಲಾಳನಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠದ ಶರಣೆ ಜಯದೇವಿ ತಾಯಿ ಹೇಳಿದರು. ಕುಶಾಲನಗರದ ಅಕ್ಕನ ಬಳಗದ ವತಿಯಿಂದ ಸ್ಥಳೀಯ ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿವ ಶರಣೆ ಅಕ್ಕಾಮಹಾದೇವಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಪ್ರವಚನ ನೀಡಿದ ಅವರು, ಮಹಾದೇವಿಯ ಸೌಂದರ್ಯಕ್ಕೆ ಮಾರು ಹೋದ ಕೌಶಿಕ ಮಹಾರಾಜ ಆಕೆಯನ್ನು ವರಿಸಲು ಎಷ್ಟೆಲ್ಲಾ ವಿಫಲ ಸಾಹಸಗಳನ್ನು ಮಾಡಿದಾಗ್ಯೂ ಚನ್ನಮಲ್ಲಿಕಾರ್ಜುನ ದೇವನೇ ಗಂಡ ಎಂದು ಇಷ್ಟದೈವವನ್ನು ಜೀವನ ಪೂರ್ತಿ ಆರಾಧಿಸಿದ ಮಹಾಚೇತನ. ಕೌಶಿಕ ಮಹಾರಾಜನ ದೌರ್ಜನ್ಯಕ್ಕೆ ಆಕ್ರೋಷ ವ್ಯಕ್ತಪಡಿಸಿ ತನ್ನೆಲ್ಲಾ ವಸ್ತ್ರ – ವೈಢೂರ್ಯಗಳನ್ನು ಕಿತ್ತೆಸೆದು ದಿಗಂಬರಳಾಗಿ ಕಲ್ಯಾಣಕ್ಕೆ ಹೋದಾಗ ಅಲ್ಲಿನ ಅನುಭವ ಮಂಟಪದ ಅಧ್ಯಕ್ಷ ಅಲ್ಲಮಪ್ರಭು ಕೂಡ ಮಹಾದೇವಿಯನ್ನು ಪರೀಕ್ಷಿಸಿದ ಬಳಿಕ ಅಕ್ಕಾ ಎಂಬ ಬಿರುದು ನೀಡಿದ್ದನ್ನು ಶಿವಶರಣೆ ಅಕ್ಕಾ ವಚನಗಳ ಮೂಲಕ ವಿಶ್ಲೇಷಿಸಿದರು. ಅವತ್ತಿನ ಶರಣ ಶರಣೆಯರ ಜೀವನ ಪದ್ಧತಿಯನ್ನು ಇಂದು ಎಲ್ಲರೂ ಕಡೆಗಣಿಸಿರುವ ಬಗ್ಗೆ ವಿಷಾದಿಸಿದ ಅಕ್ಕಾ, ನಮ್ಮ ನಮ್ಮ ಮನೆಗಳ ಪರಿಕರಗಳನ್ನು ಆಗಾಗ್ಗೆ ಬದಲಿಸುವ ನಾವು ನಮ್ಮ ಮನಸ್ಥಿತಿಗಳನ್ನು ಏಕೆ ಬದಲಿಸುತ್ತಿಲ್ಲಾ ಎಂದು ಪ್ರಶ್ನಿಸಿದ ಶರಣೆ ಅಕ್ಕಾ, ಸಮಾಜದ ಸಂಪತ್ತುಗಳಾಗಿ ನಮ್ಮ ಮಕ್ಕಳನ್ನು ನಾವು ಬೆಳೆಸಬೇಕೆಂದರೆ ಮಕ್ಕಳ ಹಣೆಯಲ್ಲಿ ವಿಭೂತಿ ಹಾಗೂ ಅಂಗದ ಮೇಲೆ ಲಿಂಗವನ್ನು ಪ್ರತಿಷ್ಠಾಪಿಸಬೇಕು. ಈ ಮೂಲಕ ಶಿವಶರಣರ ಪಂಥದ ನಮ್ಮ ವೀರಶೈವ ಪರಂಪರೆ ಹಾಗೂ ಸಂಸ್ಕಾರಗಳನ್ನು ಸಂರಕ್ಷಿಸಲು ಅವರು ಕರೆಕೊಟ್ಟರು. ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಇಂದಿನ ಮಹಿಳೆಯರು ಶಿವಶರಣೆ ಅಕ್ಕಾಮಹಾದೇವಿ ಅವರ ಆದರ್ಶಗಳು ಹಾಗೂ ಚಿಂತನೆಗಳನ್ನು ಹೊಂದುವ ಮೂಲಕ ನಮ್ಮ ಶರಣ ಪರಂಪರೆಯ ಸಂಸ್ಕಾರಗಳನ್ನು ಜೋಪಾನ ಮಾಡಬೇಕೆಂದು ಕರೆಕೊಟ್ಟರು. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಮಾತನಾಡಿದರು. ಚಿತ್ರದುರ್ಗದ ಬಸವಮಹಾಮನೆಯ ಶರಣೆ ದ್ರಾಕ್ಷಾಯಿಣಿ ದೇವಿ ಮಾತನಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಸಾಂಬಶಿವಮೂರ್ತಿ, ವೀರಶೈವ ಸರ್ಕಾರಿ ನೌಕರರ ಕ್ಷೇಮಾಭಿವೃದ್ದಿ ಅಧ್ಯಕ್ಷ ಎಸ್.ನಂದೀಶ್, ವೀರಶೈವ ಮಹಾಸಭಾ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೀಪಿಕಾ ಕರುಣ, ಅಕ್ಕನಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್, ಮಾಜಿ ಅಧ್ಯಕ್ಷೆ ವಿಜಯಪಾಲಾಕ್ಷ, ಅಕ್ಕನ ಬಳಗದ ಉಪಾಧ್ಯಕ್ಷೆ ಪ್ರೇಮ ಮಹದೇವಪ್ಪ, ಖಜಾಂಚಿ ನೇತ್ರಾವತಿ, ನಿರ್ದೇಶಕರಾದ ಮಣಿಯಮ್ಮ,ಮೋಹಿನಿ, ಲೇಖನಾ,ಮಮತಾ, ನಾಗರತ್ನ, ಲತಾ, ಗೀತಾ, ಸರೋಜಾ ಮೊದಲಾದವರಿದ್ದರು ಇದ್ದರು. ಶಿಕ್ಷಕ ಹುಲುಸೆ ಬಸವರಾಜು ಪ್ರಾಸ್ತಾವಿಕ ನುಡಿಗಳಾಡಿದರು. ಶಿಕ್ಷಕಿ ನಿರ್ಮಲ ಶಿವಲಿಂಗ ನಿರೂಪಿಸಿದರು.
ಅಕ್ಕನಬಳಗದ ಕಾರ್ಯದರ್ಶಿ ಮನುದೇವಿ ಜಗದೀಶ್ ಸ್ವಾಗತಿಸಿದರು. ಮೋಹಿನಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.