Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ : ಚಲನಚಿತ್ರ ಸಮಾಜದಲ್ಲಿ ಸುಧಾರಣೆ ತರುವ ಮಾಧ್ಯಮ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ : ಚಲನಚಿತ್ರ ಸಮಾಜದಲ್ಲಿ ಸುಧಾರಣೆ ತರುವ ಮಾಧ್ಯಮ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*

ಏಪ್ರಿಲ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.25 NEWS DESK : ಚಲನಚಿತ್ರ ಬರೀ ಮನರಂಜನೆಯಲ್ಲ. ಅದೊಂದು ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆ ತರುವ ಮಾಧ್ಯಮವಾಗಿದೆ. ಆ ನಿಟ್ಟಿನಲ್ಲಿ ಡಾ.ರಾಜ್‍ಕುಮಾರ್ ಅವರು ಕನ್ನಡ ನಾಡಿನ ಚಲನಚಿತ್ರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಕನ್ನಡಿಗರ ಕಣ್ಮಣಿಯಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಡಾ.ರಾಜ್ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡಾ.ರಾಜ್‍ಕುಮಾರ್ ಅವರು ಬೇಡರ ಕಣ್ಣಪ್ಪ, ಭಕ್ತ ಕನಕದಾಸ, ರಣಧೀರ ಕಂಠೀರವ, ಸತ್ಯ ಹರಿಶ್ಚಂದ್ರ, ಇಮ್ಮಡಿ ಪುಲಿಕೇಶಿ, ಶ್ರೀಕೃಷ್ಣ ದೇವರಾಯ, ಭಕ್ತ ಕುಂಬಾರ, ಮಯೂರ, ಬಬ್ರುವಾಹನ, ಭಕ್ತ ಪ್ರಹ್ಲಾದ, ಬಂಗಾರದ ಮುನುಷ್ಯ… ಹೀಗೆ ಹಲವು ಐತಿಹಾಸಿಕ, ಪೌರಾಣಿಕ ಮತ್ತು ಸಾಮಾಜಿಕ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಸ್ಸಿನಲ್ಲಿ ಸದಾ ಇದ್ದಾರೆ ಎಂದು ವರ್ಣಿಸಿದರು.  ಡಾ.ರಾಜ್‍ಕುಮಾರ್ ಅವರು ಗಾಯಕರಾಗಿ, ಯಾರೇ ಕೂಗಾಡಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಹೇ.. ದಿನಕರ, ಹೃದಯ ಸಮುದ್ರ, ನಾದಮಯ ಹೀಗೆ ಹಲವು ಹಾಡುಗಳನ್ನು ಹಾಡಿ ರಾಷ್ಟ್ರೀಯ ಸಿನೆಮಾ ಪ್ರಶಸ್ತಿ ಪಡೆದಿದ್ದಾರೆ ಎಂದರು.  ಕನ್ನಡ ನಾಡು-ನುಡಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಡಾ.ರಾಜ್ ಕುಮಾರ್ ಅವರು, ನಾಡಿನಲ್ಲಿ ಅಣ್ಣಾವ್ರು, ರಾಜಣ್ಣ ಎಂದು ಮನೆ ಮಾತಾಗಿದ್ದಾರೆ. ನಟ ಸಾರ್ವಭೌಮ, ಬಂಗಾರದ ಮನುಷ್ಯ, ವರನಟ ಎಂಬ ಬಿರುದನ್ನು ಪಡೆದಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿವರಿಸಿದರು.   ಅತ್ಯದ್ಭುತ ನಟರಾಗಿ, ಗಾಯಕರಾಗಿ, ವೈಯಕ್ತಿಕ ಬದುಕಿನಲ್ಲೂ ಸಹ ಸರಳ ಜೀವನ ನಡೆಸಿದ ಡಾ.ರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗದ ಕ್ಷೇತ್ರದಲ್ಲಿ ಮೇರು ಪರ್ವತ ಇದ್ದಂತೆ ಎಂದು ವರ್ಣಿಸಿದರು. ರಾಷ್ಟ್ರದ ವಿವಿಧ ರಾಜ್ಯದವರು ಕನ್ನಡ ಕಲಿಯಲು ಡಾ.ರಾಜ್ ಕುಮಾರ್ ಅವರ ಚಲನಚಿತ್ರ ನೋಡುವಂತಾಗಬೇಕು. ಅಷ್ಟರಮಟ್ಟಿಗೆ ಕನ್ನಡ ಭಾಷೆಯ ಪ್ರಬುದ್ಧತೆ ಹೊಂದಿದ್ದರು. ಗೋಕಾಕ್ ಚಳುವಳಿ ಮೂಲಕ ಕನ್ನಡ ನಾಡಿನ ಅಸ್ಮಿತೆ ಬಗ್ಗೆ ಬೆಳಕು ಚೆಲ್ಲಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪ್ರತಿಪಾದಿಸಿದರು.  ಚಲನಚಿತ್ರ ಕಲಾವಿದರಾದ ನೆರವಂಡ ಉಮೇಶ್ ಅವರು ಮಾತನಾಡಿ ಡಾ.ರಾಜ್‍ಕುಮಾರ್ ಅವರ ತಂದೆ ಪುಟ್ಟಸ್ವಾಮಯ್ಯ ಅವರು ಗುಬ್ಬಿ ವೀರಣ್ಣ ಕಂಪನಿಯಲ್ಲಿ ಕಲಾವಿದರಾಗಿ ಕೆಲಸ ಮಾಡುತ್ತಿದ್ದರು. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ಮುತ್ತುರಾಯ ದೇವರ ಭಕ್ತರಾಗಿದ್ದರು. ಆ ನಿಟ್ಟಿನಲ್ಲಿ ಡಾ.ರಾಜ್‍ಕುಮಾರ್ ಮೂಲ ಹೆಸರು ‘ಮುತ್ತುರಾಜ’ ಆಗಿತ್ತು. ಬೇಡರ ಕಣ್ಣಪ್ಪ ಚಲನಚಿತ್ರ ಸಂದರ್ಭದಲ್ಲಿ ರಾಜ್‍ಕುಮಾರ್ ಎಂದು ಹೆಸರು ಇಟ್ಟು ಚಲನಚಿತ್ರಕ್ಕೆ ಪಾದಾರ್ಪಣೆ ಮಾಡುತ್ತಾರೆ. ಕನ್ನಡ ಹೊರತುಪಡಿಸಿ ಬೇರೆ ಭಾಷೆಯಲ್ಲಿ ನಟನೆ ಮಾಡಿಲ್ಲ ಎಂದು ತಿಳಿಸಿದರು. ಡಾ.ರಾಜ್‍ಕುಮಾರ್ ಅವರು ಸರಳತೆಯ ಸಾಕಾರ ಮೂರ್ತಿಯಾಗಿದ್ದು, ಸಂವೇದನಾಶೀಲರಾಗಿ ಡಾ.ರಾಜ್‍ಕುಮಾರ್ ಅವರು ಬದುಕು ರೂಪಿಸಿಕೊಂಡಿದ್ದರು ಎಂದು ನೆರವಂಡ ಉಮೇಶ್ ಹೇಳಿದರು.  ಚಲನಚಿತ್ರ ಬರಹಗಾರರಾದ ಅನಿಲ್ ಎಚ್.ಟಿ ಅವರು ಮಾತನಾಡಿ ಡಾ.ರಾಜ್ ಕುಮಾರ್ ಅವರು ಪೌರಾಣಿಕ, ಸಾಮಾಜಿಕ ಚಲನಚಿತ್ರ ಹಾಗೂ ಹಾಡುಗಾರಿಕೆ ಹೀಗೆ ಚಿತ್ರರಂಗದ ವಿವಿಧ ಕೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು, 200 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ ಹೀಗೆ ಹತ್ತು ಹಲವು ಪ್ರಶಸ್ತಿಗಳು ಡಾ.ರಾಜ್‍ಕುಮಾರ್ ಅವರಿಗೆ ಹುಡುಕಿ ಬಂದವು ಎಂದರು.   ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ, ನಿರೂಪಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿನೀಯರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕøತಿ ಸಹಾಯಕ ನಿರ್ದೇಶಕರಾದ ಕುಮಾರ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.