
ಸುಂಟಿಕೊಪ್ಪ ಏ.25 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಆಡಳಿತ ಮಂಡಳಿ ಸಭೆಯನ್ನು ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಮಡಿಕೇರಿ ವ್ಯಾಲಿವೂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರೋಮನ್ ಕ್ಯಾಥೋಲಿಕ್‍ನ ಜಗದ್ಗುರು ಪೋಪ್ ಫ್ರಾನ್ಸಿಸ್ ನಿಧನಕ್ಕೆ ಹೊಂ ಮೌನ ಪ್ರಾರ್ಥನೆಯನ್ನು ಸಲ್ಲಿಸುವ ಮೂಲಕ ಸಂತಾಪ ಸೂಚಿಸಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ರೊಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಹಾಗೂ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಂಯುಕ್ತಾಶ್ರಯದಲ್ಲಿ ಮೇ 9, 10 ಮತ್ತು 11 ರಂದು 14ನೇ ವರ್ಷದ ಟೆನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಕ್ರೀಡಾಕೂಟವನ್ನು ಸುಂಟಿಕೊಪ್ಪದ ಜಿಯಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯಲ್ಲಿರುವ ಕ್ರೀಡಾಕೂಟವನ್ನು ಸಂಘದ ಸರ್ವ ಸದಸ್ಯರು ಸಹಭಾಗಿತ್ವ ವಹಿಸಿಕೊಳ್ಳುವುದರೊಂದಿಗೆ ಯಶಸ್ವಿಗೊಳಿಸಲು ಪಣತೊಡಬೇಕೆಂದು ಸಂಘದ ಅಧ್ಯಕ್ಷ ಜಾನ್ಸನ್ ಪಿಂಟೋ ತಿಳಿಸಿದರು. ಸಭೆಯಲ್ಲಿ ಗೌರವ ಅಧ್ಯಕ್ಷ ಜೋಕಿಂವಾಸ್, ಜೋಕಿಂ ರಾಡ್ರಿಗಸ್, ಸಂಘದ ಪ್ರಧಾನ ಕಾರ್ಯದರ್ಶಿ ಜೂಡಿವಾಸ್, ಖಜಾಂಚಿ ಜೇಮ್ಸ್ ಡಿಸೋಜ, ಕ್ರೀಡಾ ಕಾರ್ಯದರ್ಶಿ ಪ್ರಭು, ಸಂಘಟನಾ ಕಾರ್ಯಗಳಾದ ಅಂತೋಣಿ ಡಿಸೋಜ, ಮಾರ್ವಿನ್ ಲೋಬೋ, ಪಿಲಿಫ್‍ವಾಸ್, ಪಿ.ಎಫ್.ಸಬಾಸ್ಟೀನ್, ರೋಸ್‍ಮೇರಿ ರಾಡ್ರಿಗಸ್, ಗ್ರೇಸಿ ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಬಿನ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಸಬಾಸ್ಟೀನ್, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಪೀಟರ್, ಯುವ ಘಟಕದ ಅಧ್ಯಕ್ಷ ಪ್ರಶಾಂತ್ ಮತ್ತಿತರರು ಇದ್ದರು.









