
ಸುಂಟಿಕೊಪ್ಪ ಏ.25 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 47ನೇ ವಾರ್ಷಿಕ ಮಹೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು.
ಮೂರು ದಿನಗಳ ಕಾಲ ನಡೆದ ವಾರ್ಷಿಕೋತ್ಸವಕ್ಕೆ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಚಾಲನೆ ನೀಡಲಾಯಿತು. ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಿತ್ತು. ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಿತು. ನಂತರ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಸೇರಿದಂತೆ ವಿವಿಧ ದೈವಗಳ ಕೋಲ ನಡೆಯಿತು. ರಾತ್ರಿ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಾಂಲಕಾರಗಳಿಂದ ಸಿಂಗಾರಿಸಲಾಗಿತ್ತು. ಸುತ್ತ ಮುತ್ತಲ್ಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.










