
ಮಡಿಕೇರಿ ಏ.28 NEWS DESK : ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಳ್ಯಕೋಡಿ ಚಿನ್ನಪ್ಪ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಈ ಸಂದರ್ಭ ಮೃತರ ಕುಟುಂಬಕ್ಕೆ ಸರಕಾರದ ವತಿಯಿಂದ ರೂ.15ಲಕ್ಷ ಮೊತ್ತದ ಪರಿಹಾರದ ಚೆಕ್ ಅನ್ನು ಶಾಸಕರು ವಿತರಿಸಿದರು. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ, ಸಿದ್ದಾಪುರ ವಲಯ ಅಧ್ಯಕ್ಷ ಪ್ರತೀಶ್ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.









