
ನಾಪೋಕ್ಲು ಏ.29 NEWS DESK : ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಗೆ ಜಾಗೃತಿ ಕಿರಣ ಕನ್ನಡ ಪಾಕ್ಷಿಕ ಪತ್ರಿಕೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ನಡೆದ ಪತ್ರಿಕೆಯ 11ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಸ್ಥಳೀಯ ಶಾಸಕರಾದ ನಾಡ ಭರತ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಪಿಡಿಓ ಚಂದ್ರಮೌಳಿ ಹಾಗೂ ಉಪಾಧ್ಯಕ್ಷ ರೇಖಾ ಬಿ ಎಸ್ ಹಾಜರಿದು,್ದ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯದ ನಾನ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ‘ಕಾಯಕ ರತ್ನ’ ಪ್ರಶಸ್ತಿ ಹಾಗೂ ಉತ್ತಮ ಆಡಳಿತ ನಿರ್ವಹಣೆಯ ಗ್ರಾಮ ಪಂಚಾಯಿತಿಗೆ ರಾಜ್ಯಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಜಾಗೃತಿ ಕಿರಣ ಪತ್ರಿಕೆಯ ಪ್ರಧಾನ ಸಂಪಾದಕರು ಯಾಲ್ಪಿ ವಾಲಿ ಭಾಷಾ ತಿಳಿಸಿದರು.
ವರದಿ : ದುಗ್ಗಳ ಸದಾನಂದ.









