
ಮಡಿಕೇರಿ NEWS DESK ಏ.29 : ಮಡಿಕೇರಿ ನಗರ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರಭು ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಡಿಕೇರಿ ತಾಲ್ಲೂಕು ಬಂಟರ ಸಂಘದ ನಿರ್ಗಮಿತ ಅಧ್ಯಕ್ಷ ರಮೇಶ್ ರೈ ಅವರ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಪ್ರಭು ರೈ ಅವರನ್ನು ಆಯ್ಕೆ ಮಾಡಲಾಯಿತು.







