
ಮಡಿಕೇರಿ ಏ.29 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ, ವಿಶ್ವಗುರು ಹಾಗೂ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವು ಏಪ್ರಿಲ್, 30 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.









