Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆಯಲ್ಲಿ ಬಸವೇಶ್ವರರ ಜಯಂತಿ ಆಚರಣೆ : ಜಾತ್ಯತೀತ ಭಾವನೆ ಬೆಳೆಸಿಕೊಳ್ಳಲು ಶಾಸಕ ಡಾ.ಮಂತರ್ ಗೌಡ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆಯಲ್ಲಿ ಬಸವೇಶ್ವರರ ಜಯಂತಿ ಆಚರಣೆ : ಜಾತ್ಯತೀತ ಭಾವನೆ ಬೆಳೆಸಿಕೊಳ್ಳಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಏ.30 NEWS DESK : ಬಸವಣ್ಣನವರ ತತ್ವ, ಆದರ್ಶಗಳು ಪಾಲನೆಯಾಗಲಿ, ಜಾತ್ಯಾತೀತ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಸೋಮವಾರಪೇಟೆ ಬಸವ ಬಳಗ, ತಾಲ್ಲೂಕು ಆಡಳಿತ, ಹಿರಿಯ ನಾಗರಿಕರ ಟ್ರಸ್ಟ್, ಸಾಹಿತ್ಯ ಪರಿಷತ್ತು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ಪಟ್ಟಣದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬಸವೇಶ್ವರ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರರ 892 ನೇ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 12ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣದ ಸಂಕಲ್ಪ ತೊಟ್ಟಿದ್ದರು. ಇಂದು ನಾವು ಅವರ ಜಯಂತಿ ಆಚರಿಸುವುದು ಮಾತ್ರವಲ್ಲ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು, ಜಾತ್ಯಾತೀತ ಮನೋಭಾವನೆ ರೂಡಿಸಿಕೊಳ್ಳಬೇಕು ಎಂದರು.  ವಿಶ್ವದಲ್ಲಿ ಮೊದಲ ಭಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದವರು ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಇರುವ ಏಕೈಕ ಬಸವೇಶ್ವರರ ಪ್ರತಿಮೆ ಇದ್ದಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದರು.
ರಸ್ತೆಗೆ ಬಸವೇಶ್ವರರ ನಾಮಕರಣ :: ಬಸವೇಶ್ವರರ ಪ್ರತಿಮೆ ಇರುವ ವೃತ್ತಕ್ಕೆ ಅಧಿಕೃತವಾಗಿ ಬಸವೇಶ್ವರ ವೃತ್ತವೆಂದು ನಾಮಕರಣ ಮಾಡಬೇಕೆಂದು
ಕಾರ್ಯಕ್ರಮದಲ್ಲಿ ಹಾಜರಿದ್ದ ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆದಮ್ ಶಾಸಕರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಮಂತರ್ ಗೌಡ ಸಂಬಂಧಿಸಿದ ಪಂಚಾಯ್ತಿ ಸಭೆಯಲ್ಲಿ ನಿರ್ಣಯ ಕೈಗೊಂಡು ಜಾರಿಗೊಳಿಸುವಂತೆ ತಿಳಿಸಿದರು.  ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣ ನವರು ಲಿಂಗ ತಾರತಮ್ಯ, ಅಸ್ಪೃಶ್ಯತೆ ವಿರುದ್ಧ ಸಿಡಿದಿದ್ದೇವರು ಆ ಮೂಲಕ ಸಮಾನತೆ ತರಲು ಪ್ರಯತ್ನಿಸಿದರು. ಆಡು ಭಾಷೆಯಲ್ಲಿ ವಚನಗಳನ್ನು ರಚಿಸಿ ಜನಸಾಮಾನ್ಯರಿಗೆ ಪರಿಸ್ಥಿತಿಯನ್ನು ಅರ್ಥೈಸಿದರು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಿದರು ಎಂದರು. ಇಂದು ನಾವು ಅವರ ದಾರಿಯಲ್ಲಿ ಸಾಗಬೇಕಾಗಿದೆ ಆಗ ಸಮಾಜ ಸುಧಾರಣೆಯಾಗುತ್ತದೆ ಎಂದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಮಾತನಾಡಿ, ಚಿತ್ರದುರ್ಗ ಬೃಹನ್ಮಠದ ಸಹಕಾರದೊಂದಿಗೆ ಸೋಮವಾರಪೇಟೆ ಪತ್ರಕರ್ತರ ಸಂಘದ ಮೂಲಕ ನಿರ್ಮಾಣಗೊಂಡ ಬಸವೇಶ್ವರರ ಪ್ರತಿಮೆ ನಿರ್ಮಾಣಗೊಂದು 25 ನೆ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿಯೇ ಶಾಸಕ ಮಂತರ್ ಗೌಡರ ಆಸಕ್ತಿಯಿಂದ ರಸ್ತೆ ಅಗಲೀಕರಣ ಮತ್ತು ಪ್ರತಿಮೆ ಸುತ್ತಾ ಅಲಂಕರಣಿಕರಣ ಮಾಡಿರುವುದು ಗಮನಾರ್ಹ ಹಾಗು ಕೃತಜ್ಞತಾ ಕಾರ್ಯವೆಂದು ಶ್ಲಾಘಿಸಿದರು. ಕಳೆದ 24ವರ್ಷಗಳಿಂದ ಪ್ರತಿಮೆಯ ಮುಂದೆಯೇ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಾತ್ಯಾತೀತವಾಗಿ ನಡೆಸಿಕೊಂಡು ಬರುತ್ತಿದ್ದ ಸಹಕರಿಸುತ್ತಿರುವ ಸರ್ವ ಸಂಘಟನೆಗಳನ್ನು ಕೃತಜ್ಞತಾ ಭಾವದಿಂದ ಸ್ಮರಿಸಿಕೊಂಡರು. 892ನೇ ಬಸವ ಜಯಂತಿ ಅಂಗವಾಗಿ ನಿವೃತ್ತ ಮುಖ್ಯ ಶಿಕ್ಷಕ ಹಾಲೆಬೆಲೂರು ನಿರ್ವಾಣಿ ಶೆಟ್ಟಿ,ಜನರಲ್ ಕಾರ್ಯಪ್ಪ ಪ್ರಶಸ್ತಿ ಪುರಸ್ಕೃತ ಪೊಲೀಸ್ ಪೇದೆ ಸುದೀಷ್,ಪಟ್ಟಣ ಪಂಚಾಯ್ತಿ ಪೌರಸೇವಾ ನೌಕರೆ ಹೊನಲಾದೇವಿ,ಕಂದಾಯ ಇಲಾಖೆ ನಿವೃತ್ತ ಡಿ ಗ್ರೂಪ್ ನೌಕರ ಕೃಷ್ಣ ಅವರುಗಳನ್ನು ಸನ್ಮಾನಿಸಲಾಯಿತು.  ಕಾರ್ಯಕ್ರಮದಲ್ಲಿ ಕುಶಾಲನಗರದ ಶಶಿಕುಮಾರ್ ಹಾಗೂ ಮಂಜು ಭಾರ್ಗವಿ ದಂಪತಿಗಳ ಪುತ್ರಿ ಪುಟಾಣಿ ಷಷ್ಠಿಷಾಡ್ಗುಣ್ಯ ವಚನ ಕಂಠಪಾಠ ಪ್ರಸ್ತುತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕೊಡ್ಲಿಪೇಟೆ ಕಲ್ಲು ಮಠದ ಶ್ರೀ.ಮಹಾಂತ ಸ್ವಾಮೀಜಿ, ಶನಿವಾರಸಂತೆ ಸಮೀಪದ ಮಾದ್ರೆ ಗ್ರಾಮದ ಮುದ್ದಿನ ಕಟ್ಟೆ ಮಠದ ಶ್ರೀ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ,ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.  ಕಾರ್ಯಕ್ರಮದಲ್ಲಿ ಪ.ಪಂ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯರಾದ ಶೀಲಾ ಡಿಸೋಜಾ, ಸಂಜೀವ, ತಹಸಿಲ್ದಾರ್ ಕೃಷ್ಣ ಮೂರ್ತಿ, ಪ.ಪಂ ಮುಖ್ಯಾಧಿಕಾರಿ ಸತೀಶ, ಹಿರಿಯ ನಾಗರಿಕರ ಟ್ರಸ್ಟ್ ನ ಅಧ್ಯಕ್ಷ ಕೆ.ಜಿ.ಸುರೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಜೇತ್, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಪ್ಪ, ಕೆ.ಟಿ.ಡಿ.ಒ ದ ತಾಲ್ಲೂಕು ಅಧ್ಯಕ್ಷ ವಸಂತ, ಮೋಟಾರು ವಾಹನ ಚಾಲಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಸೂಡ ಸದಸ್ಯ ಬಸವರಾಜ್, ಜನಪದ ಪರಿಷತ್ತು ಅಧ್ಯಕ್ಷ ಪ್ರಕಾಶ್, ವೀರಶೈವ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಪ್ರವೀಣ್, ತಾಲ್ಲೂಕು ಅಧ್ಯಕ್ಷ ಆದರ್ಶ, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಗಿರೀಶ್, ಅಕ್ಕನ ಬಳಗದ ಕಾರ್ಯದರ್ಶಿ ಮಾಯಾಗಿರೀಶ್ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರುಗಳು, ಪಟ್ಟಣದ ಪ್ರಮುಖರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.