Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಬಸವೇಶ್ವರ ಜಯಂತ್ಯುತ್ಸವ : ಸಮ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಿ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಬಸವೇಶ್ವರ ಜಯಂತ್ಯುತ್ಸವ : ಸಮ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಿ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 30, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.30 NEWS DESK :  ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವದ ಮಹಾನ್ ಮಾನವತಾವಾದಿ ಬಸವೇಶ್ವರರು 12ನೇ ಶತಮಾನದಲ್ಲಿಯೇ ನಾಡಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಆದರೆ ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಂಡಿದ್ದಾರೆಯೇ ಎಂಬ ಬಗ್ಗೆ ಆತ್ಮ ವಿಮರ್ಶೆ ಆಗಬೇಕು ಎಂದು ಶಾಸಕ ಡಾ.ಮಂತರ್ ಗೌಡ  ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸಮಾಜದಲ್ಲಿ ಇಂದಿಗೂ ಸಹ ಬಡವರು ಮತ್ತಷ್ಟು ಕಡು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿ ಬದುಕು ನಡೆಸುತ್ತಿದ್ದಾರೆ. ಆದರೆ ಬಸವಣ್ಣ ಅವರ ಆಶಯ ಈಡೇರಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಚಿಂತಿಸಬೇಕು ಎಂದು ಡಾ.ಮಂತರ್ ಗೌಡ  ಪ್ರತಿಪಾದಿಸಿದರು.’ 12ನೇ ಶತಮಾನದಲ್ಲಿ ಬಸವೇಶ್ವರರು ಸಮ ಸಮಾಜ ನಿರ್ಮಾಣಕ್ಕೆ ಎಲ್ಲರನ್ನೂ ಒಟ್ಟುಗೂಡಿಸಿ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿದರು. ಆದರೆ ಸಮಾನತೆ ಇನ್ನೂ ತಲುಪಲಿಲ್ಲ, ಸಮಾನರಾಗಿ ಬದುಕುತ್ತಿದ್ದೇವೆ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು. ಶಿಕ್ಷಣ ಪಡೆದರೆ ಎಲ್ಲರೂ ಸಮಾನವಾಗಿ ಬದುಕುತ್ತಾರೆ ಎಂಬುದಾಗಿತ್ತು, ಆದರೆ ಉನ್ನತ ಶಿಕ್ಷಣದ ಜತೆಗೆ ಸಾಕಷ್ಟು ವೃತ್ತಿಪರ ಕೌಶಲ್ಯ ಹೊಂದಬೇಕು. ಅಷ್ಟರ ಮಟ್ಟಿಗೆ ಸ್ಪರ್ಧೆ ಎದುರಿಸಬೇಕಿದೆ ಎಂದರು. ಜಾತಿ, ಮತ, ಧರ್ಮ, ಲಿಂಗ ತಾರತಮ್ಯ ಇಲ್ಲದೆ ಬಸವಣ್ಣ ಅವರ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದರು. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಬಸವೇಶ್ವರರ ಪ್ರತಿಮೆ ಇದೆ. ಆ ನಿಟ್ಟಿನಲ್ಲಿ ಮುಂದಿನ‌ ದಿನಗಳಲ್ಲಿ ಸುತ್ತೂರು ಶ್ರೀಗಳು ಹಾಗೂ ತುಮಕೂರು ಶ್ರೀಗಳನ್ನು ಆಹ್ವಾನಿಸಿ ಬಸವ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರು ಮಾತನಾಡಿ ಬಸವೇಶ್ವರರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಬಸವೇಶ್ವರ ವಚನ ಸಂದೇಶಗಳನ್ನು ತಿಳಿದುಕೊಂಡು, ಅದನ್ನು ಪಾಲಿಸುವಂತಾಗಬೇಕು ಎಂದರು. ಬಸವ ತತ್ವಗಳು ವಿಶಾಲತೆಯಿಂದ ಕೂಡಿದ್ದು, ಬಸವೇಶ್ವರರ ವಚನಗಳು ಎಲ್ಲರ ದಾರಿದೀಪವಾಗಿದೆ ಎಂದು ಸದಾಶಿವ ಸ್ವಾಮೀಜಿ ಅವರು ವಿವರಿಸಿದರು. ಪ್ರತಿಯೊಬ್ಬರಲ್ಲಿಯೂ ಅಂತರಂಗ ಮತ್ತು ಬಹಿರಂಗದಲ್ಲಿ ಬದಲಾವಣೆ ಕಾಣುತ್ತೇವೆ, ಅಂತರಂಗ ಶುದ್ದಿಯಾಗಿರಬೇಕು. ಆಚರಣೆ, ನುಡಿಯಲ್ಲಿ ಒಂದೇ ಇರಬೇಕು. ಎಲ್ಲರಲ್ಲಿಯೂ ಕಾಯಕ ಪ್ರಜ್ಞೆ ಇರಬೇಕು ಎಂದು ಕಿರಿಕೊಡ್ಲಿ ಮಠದ ಸ್ವಾಮೀಜಿ  ಹೇಳಿದರು. ಕುಶಾಲನಗರದಲ್ಲಿ ಬಸವ ಬಳಗದ ಜಾಗ ಇದ್ದು, “ಬಸವ ಭವನ” ನಿರ್ಮಾಣಕ್ಕೆ ಅಗತ್ಯ ಸಹಕಾರಕ್ಕೆ ಶಾಸಕರಲ್ಲಿ ಮನವಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಬಸವೇಶ್ವರರು 12ನೇ ಶತಮಾನದಲ್ಲಿ ಅನುಭವ ಮಂಟಪ ಮೂಲಕ ಪ್ರತಿಯೊಬ್ಬರೂ ಸಮಾನರು ಎಂಬ ಸಂದೇಶ ಸಾರಿದರು. ಸ್ತ್ರೀಯರಿಗೆ ಸಮಾನ ಅವಕಾಶ ಕಲ್ಪಿಸಿದರು ಎಂದು ತಿಳಿಸಿದರು. ವಚನ ಕ್ರಾಂತಿಯ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನುಡಿದರು. ಯುಗಪುರುಷ ಬಸವಣ್ಣ ಅವರ ವ್ಯಕ್ತಿತ್ವವು ನಾವು ಮಾಡುವ ಕೆಲಸದ ಮೂಲಕ ದೇವರನ್ನು ಕಾಣಬೇಕು ಎಂದರು.  ಬಸವಣ್ಣ ಅವರು ಶ್ರೇಣೀಕೃತ ವ್ಯವಸ್ಥೆ, ಮೂಡನಂಬಿಕೆ, ಕಂದಾಚಾರ ಹೋಗಲಾಡಿಸಲು ಶ್ರಮಿಸಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದರು.  ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲಾನಂದ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಮಾತನಾಡಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ‘ಬಸವ ಭವನ’ ನಿರ್ಮಾಣಕ್ಕೆ ಜಿಲ್ಲಾಡಳಿತ ವತಿಯಿಂದ ಜಾಗ ಒದಗಿಸುವಂತಾಗಬೇಕು ಎಂದು ಕೋರಿದರು. ಅಖಿಲ‌ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷರಾದ ಶಿವಪ್ಪ ಅವರು ಮಾತನಾಡಿ ಬಸವೇಶ್ವರರ ವಚನಗಳು ಹಾಗೂ ಸಂದೇಶಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಜೊತೆಗೆ ಅದರಂತೆ ನಡೆದುಕೊಳ್ಳಬೇಕು ಎಂದರು. ಷಷ್ಠಿ ವಚನ ಗಾಯನ ಹಾಡಿದರು, ವಿಜಯಲಕ್ಷ್ಮಿ ಶರಣರ ವಚನ ವಾಚಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಶಂಭಾ ಶಿವಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷರಾದ ರುದ್ರಪ್ರಸನ್ನ, ಆದಿ, ಟಿ.ಜಿ.ಪ್ರೇಮಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ.ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.