
ಮಡಿಕೇರಿ ಮೇ 1 NEWS DESK : ಮಡಿಕೇರಿ ತಾಲ್ಲೂಕು ನೆಲಜಿ ಗ್ರಾಮದ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ಆಯೋಜನೆಗೊಂಡಿರುವ ನೆಲಜಿ ಕೊಡಗು ವಾರ್ಷಿಕ ಭಕ್ತಸಮಾರಾಧಾನಾ ಉತ್ಸವಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು, ಇಂತಹ ವಿಶೇಷ ಸಂದರ್ಭದಲ್ಲಿ ದೇವರ ಸನ್ನಿಧಿಗೆ ಆಗಮಿಸಿ ಇಲ್ಲಿಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದು ತನಗೆ ಅತ್ಯಂತ ಸಂತಸ ನೀಡಿದೆ. ಇಂತಹ ವಿಶೇಷ ದಿನದಲ್ಲಿ ನನಗೆ ಭಾಗಿಯಾಗಲು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಇದೇ ಸಂದರ್ಭ ಶ್ರೀದೇವರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪೌಳಿಯ ಲೋಕಾರ್ಪಣೆ ಮಾಡಿದರು.
ಕಾಂಗ್ರೆಸ್ ಮುಖಂಡರಾದ ಸಂಪನ್ ಅಯ್ಯಪ್ಪ, ಲವ ಚಿಣ್ಣಪ್ಪ, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.











