


ಮಡಿಕೇರಿ ಮೇ 2 NEWS DESK : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಫಾಕ್ ಪ್ರಚೋದಿತ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಖಂಡಿಸಿ, ಇದಕ್ಕೆ ದಿಟ್ಟ ಉತ್ತರವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು. ಮಡಿಕೇರಿಯ ಶ್ರೀ ಕೋದಂಡ ರಾಮ ದೇವಸ್ಥಾನದ ರಾಮೋತ್ಸವ ಸಮಿತಿ, ನ್ಯಾಷನಲ್ ಮೆಡಿಕೋಸ್ ಅಸೊಸಿಯೇಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ನೀಮಾ ಸೇರಿದಂತೆ ವಿವಿಧ ಸಂಘಟನೆಗಳು ಸಂಜೆ ನಗರದ ಇಂದಿರಾ ಗಾಂಧಿ ವೃತ್ತದಿಂದ ನಗರದ ಮುಖ್ಯ ಬೀದಿಯಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಿ, ಮಾನವ ಸರಪಳಿಯನ್ನು ರಚಿಸಿ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು.
ಪ್ರತಿಭಟನೆಯಲ್ಲಿ ಶ್ರೀ ಕೋದಂಡ ರಾಮ ದೇವಸ್ಥಾನದ ರಾಮೋತ್ಸವ ಸಮಿತಿ ಅಧ್ಯಕ್ಷರಾದ ಕೆ.ಎಂ.ಬಿ.ಗಣೇಶ್, ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ)ನ ಕೊಡಗು ಘಟಕದ ಅಧ್ಯಕ್ಷ ಡಾ.ರಾಜಾರಾಂ, ನ್ಯಾಷನಲ್ ಮೆಡಿಕೋ ಆರ್ಗನೈಸೇಷನ್(ಎನ್ ಎಂಬ)ನ ಯುವ ಘಟಕದ ಪ್ರಮುಖರಾದ ವಿಕ್ರಂ ಶೆಟ್ಟಿ, ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಕಾರ್ಯದರ್ಶಿ ಎನ್.ವಿ.ಉಣ್ಣಿ ಕೃಷ್ಣನ್, ಸಂಸ್ಕೃತಿ ಸಿರಿ ಬಳಗದ ಯೋಗೇಶ್ ಬಿ.ವಿ. ಸೇರಿದಂತೆ ವಿವಿಧ ಸಂಗಟನೆಗಳ ಪ್ರಮುಖರು ಕಾರ್ಯಕರ್ತರು ಪಾಲ್ಗೊಂಡಿದ್ದರು.









