ಮಡಿಕೇರಿ ಮೇ 5 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 6 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಲಿದೆ. 11.45ಕ್ಕೆ ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಲಿದೆ. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ಜರುಗಲಿದೆ. ರಾತ್ರಿ 9 ಗಂಟೆಗೆ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿದೆ. ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ಮನವಿ ಮಾಡಿದರು.











