
ಮಡಿಕೇರಿ ಮೇ 5 NEWS DESK : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಪ್ರಗತಿಯ ಯೋಜನೆಯ ವಿವರಗಳನ್ನು ಪರಿಶೀಲಿಸಲು ಕೇಂದ್ರ ಜಲಜೀವನ್ ನೀತಿ ಆಯೋಗದ DEMO ತಂಡದ ಪ್ರತಿನಿಧಿ ನಿತಿನ್ ಹಾಗೂ ಅವರ ನೇತೃತ್ವದ ತಂಡದವರು ಕೂಡುಮಂಗಳೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಯೋಜನೆಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ಸಮಗ್ರವಾಗಿ ಕಸ ವಿಲೇವಾರಿಯ ಬಗ್ಗೆ ಹಾಗೂ ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಿದರು. ಅಲ್ಲದೆ ಗ್ರಾಮೀಣಾಭಿವೃದ್ಧಿ ಕುಡಿಯುವ ನೀರು ಸರಬರಾಜು ಯೋಜನೆ ಜಲಜೀವನ್ ಮಿಷನ್ ಯೋಜನೆಗೆ ಬಗ್ಗೆ ಕೇಂದ್ರ ನೀತಿ ಸಮಿತಿಯ ತಂಡದವರು ಅಧಿಕಾರಿಗಳಿಂದ, ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳಿಂದ ಯೋಜನೆಯು ಅನುಷ್ಠಾನದ ಬಗ್ಗೆ ಮಾಹಿತಿಯನ್ನು ಪಡೆದರು.ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ ಮನೆಗಳಿಗೂ ನೀರು ಸರಬರಾಜು ಹಾಗೂ ಈ ಬಗ್ಗೆ ಗ್ರಾಮ ಪಂಚಾಯಿತಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಕೆ.ಕೆ.ಭೋಗಪ್ಪ, ಫಿಲೋಮಿನಾ, ಮಂಜು ಶಿವಮ್ಮ, ಸೋಮವಾರಪೇಟೆ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು, ಮತ್ತು ಸರಬರಾಜು ಇಲಾಖೆಯ ಸಹಾಯಕ ಇಂಜಿನಿಯರ್ ವೀರೇಂದ್ರ ಕುಮಾರ್, ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಸೇರಿದಂತೆ ಅಧಿಕಾರಿ ವರ್ಗದವರು ಮತ್ತು ಸಾರ್ವಜನಿಕರು ಹಾಜರಿದ್ದರು.









