Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲ್ಲುಮಠ : ಶ್ರೀ ಮಹಂತಸ್ವಾಮಿಗಳ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂಪನ್ನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲ್ಲುಮಠ : ಶ್ರೀ ಮಹಂತಸ್ವಾಮಿಗಳ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂಪನ್ನ*

ಮೇ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೊಡ್ಲಿಪೇಟೆ ಮೇ 6 NEWS DESK : ಧಾರ್ಮಿಕ ಸೇವಾ ಮಠ ಪರಂಪರೆಯಲ್ಲಿ ಕೊಡಗಿನ ರಾಜರ ಕೊಡುಗೆ ಅಪಾರವಾಗಿದ್ದು, ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ 108 ಮಠಗಳು ಅಸ್ಥಿತ್ವದಲ್ಲಿದೆ. ಈ ಪೈಕಿ ಕಲ್ಲುಮಠವು ಅಸ್ಥಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತುಮಕೂರು ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ ಹೇಳಿದರು. ಕೊಡ್ಲಿಪೇಟೆ ಸಮಿಪದ ಶ್ರೀ ಕಲ್ಲುಮಠದ ಮಠಾದೀಶ ಶ್ರೀ ಮಹಂತಸ್ವಾಮೀಗಳು ಮಠದ ಪೀಠಾಧ್ಯಕ್ಷರಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸ್ವಾಗತ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಗಳ ಪೀಠೋಹಣದ ಸುವರ್ಣ ಮಹೋತ್ಸವ, ಶ್ರೀ ಬಸವೇಶ್ವರ ಜಯಂತಿ, ಡಾ.ಶಿವಕುಮಾರ ಸ್ವಾಮಿ ಜಯಂತಿ, ಶ್ರೀ ನಂಜುಂಡ ಸ್ವಾಮೀಜಿ ಸಂಸ್ಮರಣೋತ್ಸವ ಹಾಗೂ ಮಠದ ಶ್ರೀ ನಂಜುಂಡೇಶ್ವರ ವಿದ್ಯಾಸ್ಥೆಯ ೨೫ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ಧಾರ್ಮಿಕ ಸಮಾರಂಭದಲ್ಲಿ ಅವರು ಮಾತನಾಡಿದರು.  ಮಠ ಮಾನ್ಯಗಳು ಧಾರ್ಮಿಕ, ಆದ್ಯಾತ್ಮಿಕ, ಸಾಮಾಜಿಕ ಸೇವಾ ಪರಂಪರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಿಂದೆ ಅಸ್ತಿತ್ವದಲ್ಲಿದ್ದ ಮಠಗಳು ಇಂದಿನ ಕಾಲಘಟ್ಟದಲ್ಲಿ ಕಡಿಮೆಯಾಗುತ್ತಿವೆ ಕೊಡಗಿನ ರಾಜಾಳ್ವಿಕೆ ಕಾಲದಲ್ಲಿ ನೂರಾರು ಮಠ ಪರಂಪರೆ ಅಸ್ತಿತ್ವದಲ್ಲಿದ್ದವು ಆದರೆ ಕೊಡಗಿನಲ್ಲಿ ಈಗ ಮಠಗಳು ಕಡಿಮೆಯಾದರೂ ಕಲ್ಲುಮಠವು ಇನ್ನು ಸಹ ಮಠ ಪರಂಪರೆಯನ್ನು ಉಳಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಕಲ್ಲುಮಠದ ಶ್ರೀ ಮಹಂತಸ್ವಾಮಿಗಳು ಪೀಠಾಧ್ಯಕ್ಷರಾಗಿ 50 ವರ್ಷಗಳನ್ನು ಪೂರೈಸಿದ್ದಾರೆ ಕಳೆದ 50 ವರ್ಷದಲ್ಲಿ ಅವರು ಮಠವನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆದ್ಯಾತ್ಮಿಕವಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಇತರೆ ಮಠಗಳು ಮತ್ತು ಮಠಾಧೀಶರಿಗೆ ಅವರು ಮಾದರಿಯಾಗಿದ್ದಾರೆ ಈ ಮೂಲಕ ಅವರು ಮಠವನ್ನು ಮತ್ತಷ್ಟು ಅಭಿವೃದ್ದಿ ಪಡುವಂತೆ ಹಾರೈಸಿದರು. ಶ್ರೀ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ ಮನುಷ್ಯ ಜೀವನವನ್ನು ಎಚ್ಚರಿಕೆಯಿಂದ ಸಾಗಿಸಿದರೆ ಜೀವನದಲ್ಲಿ ಸಾರ್ಥಕತೆಯನ್ನು ಕಾಣಬಹುದು ಮಠ, ಶರಣ ಸಂಪರ್ಕದಿಂದ ದುಖ ದುಮ್ಮಾನಗಳು ದೂರವಾಗುತ್ತದೆ. ಇದರ ಸಲುವಾಗಿ ಮಠ ಮಾನ್ಯಗಳಿದ್ದು ಈ ನಿಟ್ಟಿನಲ್ಲಿ ಮಠಕ್ಕೆ ಭಕ್ತರ ಕಷ್ಟ ಕಾರ್ಪಣ್ಯಗಳು ದೂರವಾಗುತ್ತದೆ ಎಂದರು. ಆದ್ಯಾತ್ಮಿಕ ಸಾಂಸ್ಕೃತಿಕ ಪರಂಪರನೆಯಲ್ಲಿ ಕೊಡಗಿನ ಅರಸರ ಕೊಡುಗೆ ಇತಿಹಾಸ ಪುಟದಲ್ಲಿ ಸೇರಿಕೊಂಡಿದೆ ಈ ದಿಸೆಯಲ್ಲಿ ಕೊಡಗಿನಲ್ಲಿ ಹಲವಾರು ಮಠಗಳು ಆದ್ಯಾತ್ಮಿಕ, ಶೈಕ್ಷಣಿಕವಾಗಿ ಅಭಿವೃದ್ದಿಯಾಗುತ್ತಿದ್ದು ಈ ಪೈಕಿ ಕಲ್ಲುಮಠವು ಶೈಕ್ಷಣಿಕವಾಗಿ ಅಭಿವೃದ್ದಿಗೊಳ್ಳುತ್ತಿದೆ. ಇದಕ್ಕೆ ಮಠಾದೀಶರಾದ ಶ್ರೀ ಮಹಂತಸ್ವಾಮಿಗಳ 50 ವರ್ಷಗಳ ಪರಿಶ್ರಮವೆ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಕಲ್ಲುಮಠದ ಮಠಾದೀಶ ಶ್ರೀ ಮಹಂತಸ್ವಾಮೀಜಿ ಪ್ರಸ್ತಾವಿಕವಾಗಿ ಮಾತನಾಡಿ-ಶ್ರೀಬಸವಣ್ಣ ನವರ ಸಿದ್ದಾಂತದಲ್ಲಿ ಮಠ ಮಂದಿರಗಳಿದ್ದರೂ ಇಂದು ಧಾರ್ಮಿಕ ಮತ್ತು ಆದ್ಯಾತ್ಮಿಕ ಹಸಿರು ಕಾಣುವುದಿಲ್ಲ ಇದರ ಬದಲಿಗೆ ಹಣದ ಹಸಿರು ಹೆಚ್ಚಾಗುತ್ತಿದೆ ಧಾರ್ಮಿಕತೆಯ ಹಿಂದೆ ಹೋಗಬೇಕಾದವರು ಹಣದ ಹಿಂದೆ ಹೋಗುತ್ತಿದ್ದಾರೆ ಎಂದು ವಿಷಾಧಿಸಿದ ಅವರು ಮಠಾದೀಶರಾಗುವುದು ಹೂವಿನ ಹಾಸಿಗೆ ಅಲ್ಲ ಮುಳ್ಳಿನ ಹಾಸಿಗೆ ಇಂತಹ ಸವಾಲಿನಲ್ಲಿ 50 ವರ್ಷದ ಹಿಂದೆ ಕಲ್ಲುಮಠವನ್ನು ಹಲವಾರು ಸವಾಲಿನ ನಡುವೆ ಅಭಿವೃದ್ದಿ ಪಡಿಸಿರುವುದನ್ನು ಪ್ರಸ್ತಾವಿಕ ನುಡಿಯಲ್ಲಿ ಸ್ಮರಿಸಿದರು. ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಮಾತನಾಡಿ-ನಾಡಿನಲ್ಲಿ ಮಠಗಳ ಕೊಡುಗೆ ಅಪಾರ ಆದರೆ ವಿಶ್ವದ್ಯಾಂತ ಲಿಂಗಾಯತ, ವೀರಶೈವ ಸಮಾಜದ ಬಾಂಧವರು 5 ಕೋಟಿಗಿಂತ ಹೆಚ್ಚು ಇದ್ದಾರೆ. ಆದರೆ ನಮ್ಮ ಸಮೂದಾಯಕ್ಕೆ ಸರಕಾರದಿಂದ ರಾಜಕೀಯವಾಗಿ, ಶೈಕಣಿಕವಾಗಿ, ಆರ್ಥಿಕವಾಗಿಯೂ ಸ್ಥಾನಮಾನಗಳು ದೊರೆತ್ತಿಲ್ಲ ದೇಶದಲ್ಲಿ ಸಿಖ್ಖ್, ಜೈನ ಮುಂತಾದ ಅಲ್ಪಸಂಖ್ಯಾತದವರ ಸಂಖ್ಯೆ ಕಡಿಮೆ ಇದ್ದರೂ ಆ ಸಮೂದಯ ಅಭಿವೃದ್ದಿಗೊಳ್ಳುತ್ತಿದೆ ಇದಕ್ಕೆ ನಮ್ಮ ಸಮೂದಾಯದವರಲ್ಲಿ ಸಂಘಟಿತ ಕೊರತೆಯೇ ಕಾರಣವಾಗಿದೆ ಇನ್ನಾದರೂ ನಮ್ಮ ಸಮೂದಾಯ ಒಗ್ಗಟ್ಟಿನಿಂದ ನಮ್ಮ ಸಮಾಜವನ್ನು ಅಭಿವೃದ್ದಿ ಪಡಿಸುವಂತೆ ಸಲಹೆ ನೀಡಿದರು.  ಕಾರ್ಯಕ್ರಮದಲ್ಲಿ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವಸ್ವಾಮೀ, ಕನಕಪುರ ದೇಗುಲಮಠದ ಶ್ರೀಚನ್ನಬಸವ ಸ್ವಾಮೀಜಿ ಜಿಲ್ಲೆ ಮತ್ತು ಹೊರ ಜಿಲ್ಲೆಯ ವಿವಿಧ ಮಠಗಳ ಮಠಾದೀಶರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಸ್ವಾಗತ ಸಮೀತಿ ಅಧ್ಯಕ್ಷ ವಿದ್ಯಾಶಂಕರ್, ಕಾರ್ಯದರ್ಶಿ ಎಸ್.ಮಹೇಶ್ ಜನಪ್ರತಿನಿಧಿಗಳು, ಪ್ರಮುಖರು ಹಾಜರಿದ್ದರು. ಈ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.